ಸುಂಟಿಕೊಪ್ಪ, ಮಾ. ೧೮:ಕೆದಕಲ್ ಗ್ರಾಮದ ಭದ್ರಕಾಳೇಶ್ವರಿ ದೇವಾಲಯದ ೨೬ನೇ ವಾರ್ಷಿಕೋತ್ಸವ ವಿವಿಧ ಧಾರ್ಮಿಕ ವಿಧಿವಿಧಾನಗಳೊಂದಿಗೆ ಶ್ರದ್ಧಾಭಕ್ತಿಯಿಂದ ನೆರವೇರಿತು.
ದೇವಾಲಯದ ಪ್ರಧಾನ ಅರ್ಚಕ ಲಕ್ಷಿö್ಮÃ ನಾರಾಯಣ ಭಟ್ ಅವರ ನೇತೃತ್ವದಲ್ಲಿ ಗಣಪತಿ ಹೋಮದೊಂದಿಗೆ ಧಾರ್ಮಿಕ ವಿಧಿವಿಧಾನಗಳು ನಡೆದವು. ಕುಂಭಾಭಿಷೇಕ ಮತ್ತು ಕಳಶ ಪೂಜೆ, ಹೂವಿನ ಪೂಜೆ, ಕುಂಕುಮಾರ್ಚನೆ ನಡೆಯಿತು. ನೆರೆದಿದ್ದ ನೂರಾರು ಭಕ್ತರಿಗೆ ದೇವಾಲಯದ ವತಿಯಿಂದ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.
ವಾರ್ಷಿಕೋತ್ಸವದ ಅಂಗವಾಗಿ ದೇವಾಲಯವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.
ದೇವಾಲಯ ಸಮಿತಿಯ ಅಧ್ಯಕ್ಷ ಸಿ.ಎ. ಕರುಂಬಯ್ಯ, ಕಾರ್ಯದರ್ಶಿ ಕೆ.ಎಂ. ಸತೀಶ್, ತಕ್ಕ ಮುಖ್ಯಸ್ಥರಾದ ಪುಲ್ಲೇರ ತಿಮ್ಮಯ್ಯ, ಪುಲ್ಲೇರ ಕಾಳಪ್ಪ, ಪಿ.ಬಿ.ವಸಂತ ಸೇರಿದಂತೆ ಪದಾಧಿಕಾರಿಗಳು ಹಾಜರಿದ್ದರು.