ಮಡಿಕೇರಿ, ಮಾ. ೧೮ : ವಿಶ್ವ ಜನಾಂಗೀಯ ತಾರತಮ್ಯ ನಿರ್ಮೂಲನಾ ದಿನವಾದ ಮಾ.೨೧ ರಂದು ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆಯ ವತಿಯಿಂದ ಮಡಿಕೇರಿ ಹೊರವಲಯದ ಕ್ಯಾಪಿಟಲ್ ವಿಲೇಜ್ನಲ್ಲಿ ವಿಚಾರ ಸಂಕಿರಣ ನಡೆಯಲಿದೆ.
ಬೆಳಿಗ್ಗೆ ೧೦ ಗಂಟೆಗೆ ಹಮ್ಮಿಕೊಂಡಿರುವ “ಕೊಡವ ಕ್ವೆಸ್ಟ್” ವಿಚಾರ ಸಂಕಿರಣದಲ್ಲಿ ಮಾಜಿ ಸಂಸದ ಮತ್ತು ಖ್ಯಾತ ವಿದ್ವಾಂಸ ಡಾ. ಎಲ್. ಹನುಮಂತಯ್ಯ, ಖ್ಯಾತ ವಕೀಲರುಗಳಾದ ಕೆ.ಪಿ. ಬಾಲಸುಬ್ರಹ್ಮಣ್ಯ, ಎಂ.ಟಿ. ನಾಣಯ್ಯ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಪ್ರೊ. ಡಾ. ಮುಲ್ಲೇಂಗಡ ರೇವತಿ ಪೂವಯ್ಯ ಅವರುಗಳು ವಿಚಾರ ಮಂಡನೆ ಮಾಡಲಿದ್ದಾರೆ ಎಂದು ಸಿಎನ್ಸಿ ಅಧ್ಯಕ್ಷ ಎನ್.ಯು. ನಾಚಪ್ಪ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.