ಸುಂಟಿಕೊಪ್ಪ, ಮಾ. ೨೦: ಮಾದಾಪುರ ರಾಜ್ಯ ಹೆದ್ದಾರಿ ಬದಿಯಲ್ಲಿದ್ದ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವಿಗೀಡಾಗಿ ಹಾಗೂ ಹಿಂಬದಿ ವ್ಯಕ್ತಿ ಗಾಯಗೊಂಡ ಘಟನೆ ಗುರುವಾರ ಮಧ್ಯಾಹ್ನ ಸುಂಟಿಕೊಪ್ಪ ಸಮೀಪದ ಕೆಂಚಟ್ಟಿಯಲ್ಲಿ ನಡೆದಿದೆ.
ಸುಂಟಿಕೊಪ್ಪದಿAದ ಮಾದಾಪುರ ಕಡೆಗೆ ಬೈಕ್ನಲ್ಲಿ ತೆರಳುತ್ತಿದ್ದಾಗ ನಿಯಂತ್ರಣ ಕಳೆದುಕೊಂಡು ಕೆಂಚಟ್ಟಿಯಲ್ಲಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದೆ. ಇದರಿಂದ ತೀವ್ರ ಗಾಯಗೊಂಡ ಜಂಬೂರು ನಿವಾಸಿ ಅನಿಲ್ ಕುಮಾರ್ (೩೬) ಸ್ಥಳದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.
ಹಿಂಬದಿ ಸವಾರ ಗರಗಂದೂರು ಗ್ರಾಮದ ದಿನೇಶ್ ಎಂಬವರು ಗಾಯಗೊಂಡಿದ್ದು, ಇವರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಯ ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸ್ ಠಾಣಾಧಿಕಾರಿ ಮೋಹನ್ರಾಜ್ ಹಾಗೂ ಸಿಬ್ಬಂದಿ ತೆರಳಿ ಸ್ಥಳ ಪರಿಶೀಲನೆ ನಡೆಸಿ ಮೊಕದ್ದಮೆ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.