೭ನೇ ಹೊಸಕೋಟೆಯ ತೊಂಡೂರು ಗ್ರಾಮದಲ್ಲಿ ನೆಲೆಸಿದ್ದ ಕಾಫಿ ಬೆಳೆಗಾರ ಚೇನಂಡ ಎ. ಉತ್ತಯ್ಯ (೯೨) ತಾ. ೧೯ ರಂದು ನಿಧನರಾದರು.

ಮೃತರು ಓರ್ವ ಪುತ್ರ ಮತ್ತು ಪುತ್ರಿಯನ್ನು ಆಗಲಿದ್ದಾರೆ. ಚೇನಂಡ ಉತ್ತಯ್ಯ ಅವರು ಕುಟುಂಬದ ಪಟ್ಟೇದಾರರಾಗಿದ್ದರು.

ಲಯನ್ಸ್ ಕ್ಲಬ್‌ನ ಹಿರಿಯ ಸದಸ್ಯರಾಗಿ, ಕೊಡಗರಹಳ್ಳಿಯ ಶಾಂತಿನಿಕೇತನ ಆಂಗ್ಲ ಮಾಧ್ಯಮ ಶಾಲೆಯ ಆಡಳಿತ ಮಂಡಳಿಯ ಕಾರ್ಯದರ್ಶಿ ಮತ್ತು ಆಡಳಿತ ಮಂಡಳಿಯ ಅಧ್ಯಕ್ಷರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿದ್ದರು.

ಕೊಡಗರಹಳ್ಳಿಯ ಶ್ರೀ ಬೈತೂರಪ್ಪ ಪೊವ್ವೊದಿ ಬಸವೇಶ್ವರ ದೇವಸ್ಥಾನ ಟ್ರಸ್ಟ್ನ ಸ್ಥಾಪಕ ಟ್ರಸ್ಟಿಗಳಲ್ಲಿ ಒಬ್ಬರಾಗಿದ್ದರು. ಸುಂಟಿಕೊಪ್ಪ ಕೊಡವ ಸಮಾಜದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.