ಕುಶಾಲನಗರ, ಮಾ. ೨೨: ಕುಶಾಲನಗರ ಎಸ್ಎಲ್ಎನ್ ಸ್ಕ÷್ವಯರ್ ಸಭಾಂಗಣದಲ್ಲಿ ಮಡಿಕೇರಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪ್ರಮುಖರು, ಮುಖಂಡರು ಹಾಗೂ ಕಾರ್ಯಕರ್ತರ ಸಮಾಲೋಚನಾ ಸಭೆ ನಡೆಯಿತು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಶಾಸಕ ಡಾ. ಮಂತರ್ ಗೌಡ ಮಾತನಾಡಿ, ಪ್ರತಿಯೊಬ್ಬ ಕಾರ್ಯಕರ್ತರು ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಕರೆ ನೀಡಿದರು. ಕಾರ್ಯಕರ್ತರ ಶ್ರಮದಿಂದ ತಾನು ಕ್ಷೇತ್ರದ ಪ್ರತಿನಿಧಿಯಾಗಿ ಕಾರ್ಯನಿರ್ವಹಿಸಲು ಸದವಾಕಾಶ ದೊರೆತಿದ್ದು, ತಮ್ಮೆಲ್ಲರ ನಿರಂತರ ಬೆಂಬಲದ ಅಗತ್ಯವಿದೆ. ತಾನು ಕಾಂಗ್ರೆಸ್ಸಿಗೆ ನಿಷ್ಠನಾಗಿದ್ದು, ಕ್ಷೇತ್ರದ ಅಭಿವೃದ್ಧಿಯತ್ತ ತನ್ನ ಚಿತ್ತ ಎಂದ ಅವರು ಯಾವುದೇ ಸಂದರ್ಭದಲ್ಲೂ ಬಿಜೆಪಿ ಕಡೆಗೆ ವಾಲುವ ಸಾಧ್ಯತೆಯೇ ಇಲ್ಲ ಎಂದು ಹೇಳುವ ಮೂಲಕ ಅಲ್ಲಲ್ಲಿ ಕೇಳಿ ಬರುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದರು.
ಮಡಿಕೇರಿ ಕ್ಷೇತ್ರದಲ್ಲಿ ಹಲವು ಯೋಜನೆಗಳನ್ನು ಮುಂದಿನ ಕೆಲವೇ ದಿನಗಳಲ್ಲಿ ಪೂರ್ಣಗೊಳಿಸುವ ಚಿಂತನೆಯಿದ್ದು, ಸರ್ಕಾರ ಎಲ್ಲಾ ರೀತಿಯಲ್ಲಿಯೂ ಸಹಕಾರ ನೀಡುತ್ತಿದೆ ಎಂದು ನುಡಿದರು.
ಕಾಂಗ್ರೆಸ್ ವಕ್ತಾರ ಲಕ್ಷö್ಮಣ್ ಮಾತನಾಡಿ, ಕ್ಷೇತ್ರದಲ್ಲಿ ಯಾವುದೇ ಕಾರ್ಯಕರ್ತರನ್ನು ಕಡೆಗಣಿಸುವಂತಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷದಲ್ಲಿ ಕಾರ್ಯನಿರ್ವಹಿಸುತ್ತಿರುವುದಾಗಿ ತಿಳಿಸಿದರು.
ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ. ಶಶಿಧರ್, ಸೋಮವಾರಪೇಟೆ ಬ್ಲಾಕ್ ಅಧ್ಯಕ್ಷ ಟಿ.ಜಿ. ಸತೀಶ್, ಮಡಿಕೇರಿ ಬ್ಲಾಕ್ ಅಧ್ಯಕ್ಷ ಹೆಚ್.ಎ. ಹಂಸ ಅವರುಗಳು ತಮ್ಮ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆಯ ಬಗ್ಗೆ ಸಮಗ್ರ ಮಾಹಿತಿಯನ್ನು ಒದಗಿಸಿದರು. ರಾಜ್ಯ ಸರ್ಕಾರದ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕಾರ್ಯಕರ್ತರು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ರಾಜ್ಯ ಸರ್ಕಾರದ ಸಮಗ್ರ ಯೋಜನೆಗಳ ಬಗ್ಗೆ ಮಾಹಿತಿಗಳನ್ನು ಒದಗಿಸುವಂತಾಗಬೇಕು, ಮನರೇಗಾ ಸಂಬAಧ ಹೋರಾಟ ಅತ್ಯಂತ ಪರಿಣಾಮಕಾರಿಯಾಗಿ ನಡೆಯಬೇಕು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಬಗ್ಗೆ ಮತದಾರರಲ್ಲಿ ಜಾಗೃತಿ ಮೂಡಿಸಬೇಕು. ಜಿ.ಪಂ., ತಾ.ಪಂ., ಗ್ರಾ.ಪಂ. ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವಿಗೆ ಪಣತೊಡಬೇಕು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ಸಭೆಯಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಪ್ರಮುಖರಾದ ಟಿ.ಪಿ. ರಮೇಶ್, ಚಂದ್ರಮೌಳಿ, ಕೆ.ಎ. ಯಾಕೂಬ್, ಮಂಜುನಾಥ್ ಗುಂಡುರಾವ್, ಕೆ.ಪಿ. ಚಂದ್ರಕಲಾ, ಕೆ.ಕೆ. ಮಂಜುನಾಥ್ ಕುಮಾರ್, ಲೋಕೇಶ್ ಕುಮಾರ್, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಲತಾ, ಜಿಲ್ಲಾ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಹನೀಫ್, ನಾಪಂಡ ಮುತ್ತಪ್ಪ, ಇಂಟಕ್ ಜಿಲ್ಲಾ ಅಧ್ಯಕ್ಷ ಬಿ.ಡಿ. ಅಣ್ಣಯ್ಯ, ಜಿಲ್ಲಾ ತಾಲೂಕು ಘಟಕಗಳ ಪದಾಧಿಕಾರಿಗಳು, ಹಿಂದುಳಿದ, ಅಲ್ಪಸಂಖ್ಯಾತ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಸೇರಿದಂತೆ ಸಾವಿರಕ್ಕೂ ಅಧಿಕ ಕಾರ್ಯಕರ್ತರು ಸಭೆಯಲ್ಲಿ ಪಾಲ್ಗೊಂಡಿದ್ದರು.
ಸಭೆ ನಂತರ ಯುಗಾದಿ ಮತ್ತು ರಂಜಾನ್ ಹಬ್ಬ ಅಂಗವಾಗಿ ಪಕ್ಷದ ವತಿಯಿಂದ ಕಾರ್ಯಕರ್ತರಿಗೆ ಬಾಡೂಟ ಏರ್ಪಡಿಸಲಾಗಿತ್ತು.