ವೀರಾಜಪೇಟೆ, ಮಾ. ೨೨: ಸಮಾಜ ಕಲ್ಯಾಣ ಇಲಾಖೆ ಮತ್ತು ದಲಿತ ಸಂಘರ್ಷ ಸಮಿತಿ ಅಣ್ಣಯ್ಯ ಬಣದ ನೇತೃತ್ವದ ರಾಜ್ಯ ಹಾಗೂ ಕೇಂದ್ರ ಸಮಿತಿ ಜಂಟಿ ಆಶ್ರಯದಲ್ಲಿ ಸಾರ್ವಜನಿಕರು ಸೇರುವ ಸ್ಥಳಗಳು, ಶಾಲೆಗಳು ಮತ್ತು ಕಾಲೋನಿಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ದೌರ್ಜನ್ಯ ತಡೆ ನಿಯಂತ್ರಣ ಕಾಯ್ದೆ ಕುರಿತು ಜಾಗೃತಿ ಮೂಡಿಸುವ ಅರಿವು ಕಾರ್ಯಕ್ರಮಗಳನ್ನು ನಡೆಸಲಾಯಿತು.
ಈ ಸಂದರ್ಭ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಹೆಚ್.ಜಿ ಗೋಪಾಲ್, ಸಂಘಟನೆ ಸಂಚಾಲಕ ಹೆಚ್.ಟಿ ಮಂಜು, ಮಹಿಳಾ ಘಟಕದ ಅಧ್ಯಕ್ಷೆ ಮಂಜುಳಾ ಮತ್ತಿತರರು ಉಪಸ್ಥಿತರಿದ್ದರು.