ಮಡಿಕೇರಿ ಮಾ.೨೪ : ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ಮಡಿಕೇರಿಯ ಮಲ್ಲಿಕಾರ್ಜುನ ನಗರದ ಶ್ರೀ ಕೋದಂಡ ರಾಮ ದೇವಾಲಯದಲ್ಲಿ ೩೭ನೇ ವರ್ಷದ ಶ್ರೀ ರಾಮೋತ್ಸವ ಹಾಗೂ ದ್ವಿತೀಯ ವರ್ಷದ ಪುನರ್ ಪ್ರತಿಷ್ಠಾಪನಾ ಮಹೋತ್ಸವ ತಾ..೨೬ ಮತ್ತು ೨೭ ರಂದು ವಿಜೃಂಭಣೆಯಿAದ ನಡೆಯಲಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಶ್ರೀ ಕೋದಂಡ ರಾಮೋತ್ಸವ ಸಮಿತಿ ಅಧ್ಯಕ್ಷ ಕೆ.ಎಂ.ಗಣೇಶ್; ಎರಡು ದಿನಗಳ ಕಾಲ ನಡೆಯುವ ಧಾರ್ಮಿಕ ವಿಧಿ ವಿಧಾನಗಳ ಕುರಿತು ಮಾಹಿತಿ ನೀಡಿದರು. ತಾ.೨೬ರಂದು ಸಂಜೆ ೫ ಗಂಟೆಗೆ ಶ್ರೀ ರಾಮೋತ್ಸವದ ಅಂಗವಾಗಿ ಮಡಿಕೇರಿಯ ಗಾಂಧಿ ಮೈದಾನದಿಂದ ನಗರದಲ್ಲಿ ಭವ್ಯ ಮೆರವಣಿಗೆ ಸಾಗಲಿದೆ. ಮೆರವಣಿಗೆ ಸಂದರ್ಭ ವಿಶೇಷ ಪಲ್ಲಕ್ಕಿಯಲ್ಲಿ ಆಸೀನಗೊಂಡ ಶ್ರೀ ಕೋದಂಡ ರಾಮ ಪರಿವಾರ ಉತ್ಸವ ಮೂರ್ತಿಯನ್ನು ಹೊತ್ತು ನಗರದ ಪ್ರಮುಖ ರಸ್ತೆಗಳಲ್ಲಿ ತೆರಳಲಾಗುತ್ತದೆ. ಗಾಂಧಿ ಮೈದಾನದಿಂದ ಜನರಲ್ ತಿಮ್ಮಯ್ಯ ವೃತ್ತಕ್ಕೆ ಸಾಗಿ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಸಾಗುತ್ತದೆ. ವಿವಿಧ ಆಕರ್ಷಕ ನೃತ್ಯ, ಚಂಡೆ ವಾದ್ಯ ಸಹಿತ ಸಾಂಸ್ಕೃತಿಕ ಕಲಾತಂಡಗಳು, ಕಲಶ ಹೊತ್ತ ಮಹಿಳೆಯರು, ವಿವಿಧ ತಂಡಗಳಿAದ ಭಜನೆಯೊಂದಿಗೆ ಮೆರವಣಿಗೆ ಸಾಗಲಿದೆ. ಮಹದೇವಪೇಟೆಯ ಬನ್ನಿ ಮಂಟಪದವರೆಗೆ ತೆರಳಿ ಅಲ್ಲಿಂದ ಶ್ರೀ ಕೋದಂಡ ರಾಮ ದೇವಾಲಯವನ್ನು ಸೇರಲಿದೆ. ಅಂದು ರಾತ್ರಿ ದೇವಾಲಯದ ಆವರಣದಲ್ಲಿ ಭಕ್ತರಿಗೆ ಅನ್ನ ಸಂತರ್ಪಣೆ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.

ಧಾರ್ಮಿಕ ಕಾರ್ಯಗಳು

ತಾ.೨೭ ರಂದು ಬೆಳಿಗ್ಗೆ ೮ ಗಂಟೆಯಿAದ ದೇವಾಲಯದ ಆವರಣದಲ್ಲಿ ಕ್ಷೇತ್ರ ತಂತ್ರಿಯವರಾದ ವೇದಮೂರ್ತಿ ಶ್ರೀಕೃಷ್ಣ ಉಪಾಧ್ಯ ೪ಐದನೇ ಪುಟಕ್ಕೆ

(ಮೊದಲ ಪುಟದಿಂದ) ಅವರ ನೇತೃತ್ವದಲ್ಲಿ ಶ್ರೀ ರಾಮ ನವಮಿ ಮತ್ತು ದೇವಾಲಯದ ಪುನರ್ ಪ್ರತಿಷ್ಠಾಪನಾ ಉತ್ಸವದ ಅಂಗವಾಗಿ ವಿವಿಧ ಧಾರ್ಮಿಕ ಹಾಗೂ ವೈದಿಕ ಕಾರ್ಯಗಳು ಜರುಗಲಿವೆ. ಅಂದು ಗುರು ಗಣಪತಿ ಹೋಮ, ಮಹಾ ಸಂಕಲ್ಪ, ಮಹಾ ಗಣಪತಿ ಹೋಮ, ನವಗ್ರಹ ಹೋಮ, ರಾಮ ತಾರಕ ಹೋಮ, ತತ್ವಕಲಾ ಹೋಮ, ಶಾಂತಿ ಹೋಮ, ಪೂರ್ಣಾಹುತಿ, ಪಂಚಾಮೃತ ಅಭಿಷೇಕ, ನವಕ ಪ್ರಧಾನ, ಕಲಶಾಭಿಷೇಕ, ಕುಂಭಾಭಿಷೇಕ ನಡೆಯಲಿದೆ. ಅಲ್ಲದೆ ದೇವಾಲಯ ಆವರಣದಲ್ಲಿ ಬೆಳಿಗ್ಗೆ ೧೧ಗಂಟೆಗೆ ದೇವ ನರ್ತನ ಕಾರ್ಯಕ್ರಮವಿದೆ. ಮಧ್ಯಾಹ್ನ ೧೨.೩೦ ಗಂಟೆಗೆ ಮಹಾಪೂಜೆ, ಮಂತ್ರಾಕ್ಷತೆ, ತೀರ್ಥ ಪ್ರಸಾದ ನಡೆಯಲಿದೆ. ಆ ನಂತರ ದೇವಾಲಯ ಆವರಣದಲ್ಲಿ ಕೋಸಂಬರಿ- ಪಾನಕ ವಿತರಣೆಯಾಗಲಿದೆ. ಅಲ್ಲದೆ, ಭಕ್ತಾದಿಗಳಿಗೆ ಅನ್ನಸಂತರ್ಪಣೆ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ತಿಳಿಸಿದರು.

ಭಜನೆ-ಪ್ರವಚನ

ಸಂಜೆ ೫ ರಿಂದ ೭ ರವರೆಗೆ ವಿವಿಧ ಭಜನಾ ತಂಡಗಳಿAದ ಭಜನೆ ನಡೆಸಲಾಗುತ್ತದೆ. ಬಳಿಕ ಬೆಂಗಳೂರು ಹಲಸೂರುವಿನ ರಾಮಕೃಷ್ಣ ಮಠದ ಅಧ್ಯಕ್ಷರಾದ ಶ್ರೀ ಬೋಧಸ್ವರೂಪಾನಂದಜಿ ಮಹಾರಾಜ್ ಅವರಿಂದ ಧಾರ್ಮಿಕ ಪ್ರವಚನ ನಡೆಯಲಿದೆೆ. ನಂತರ ರಾತ್ರಿ ಭಕ್ತಾದಿಗಳಿಗೆ ಉಪಹಾರದ ವ್ಯವಸ್ಥೆ ಮಾಡಲಾಗಿದೆ. ಕಳೆದ ಬಾರಿಯೂ ಜನರು ಎಲ್ಲ ರೀತಿಯ ಸಹಕಾರ ನೀಡಿದ್ದರು. ಈ ಬಾರಿಯೂ ಸಹಕಾರ ನೀಡಿದ್ದಾರೆ. ಮೆರವಣಿಗೆ ಸೇರಿದಂತೆ ದೇವತಾ ಕಾರ್ಯಗಳಲ್ಲಿ ಸುಮಾರು ೫ ಸಾವಿರ ಭಕ್ತರು ಸೇರುವ ನಿರೀಕ್ಷೆ ಇದೆ ಎಂದು ಗಣೇಶ್ ವಿವರಿಸಿದರು.

ರಂಗೋಲಿ-ಕ್ರೀಡೆ

ವಿದ್ಯಾರ್ಥಿಗಳಿಗೆ ೧೦ನೇ ತರಗತಿ ಪರೀಕ್ಷೆ ನಡೆಯುತ್ತಿರುವ ಕಾರಣ ತಾ.೨೮ ರಂದು ಸಂಜೆ ಗಾಂಧಿ ಮೈದಾನದಲ್ಲಿ ಆಯೋಜಿಸಲು ಉದ್ದೇಶಿಸಲಾಗಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ರದ್ದುಪಡಿಸಲಾಗಿದೆ. ತಾ.೨೫ ರಂದು(ಇAದು) ಕ್ರೀಡಾ ಸಮಿತಿಯ ವತಿಯಿಂದ ಶ್ರೀ ಕೋದಂಡ ರಾಮ ದೇವಾಲಯದ ಆವರಣದಲ್ಲಿ ರಂಗೋಲಿ ಸ್ಪರ್ಧೆ, ಭಾರದ ಗುಂಡು ಎಸೆತ ಸೇರಿದಂತೆ ವಿವಿಧ ಕ್ರೀಡೆಗಳು ನಡೆಯಲಿವೆ ಎಂದರು.

ಶ್ರೀ ಕೋದಂಡ ರಾಮ ದೇವಾಲಯ ಟ್ರಸ್ಟ್ನ ಪ್ರಧಾನ ಸಲಹೆಗಾರ ಜಿ.ರಾಜೇಂದ್ರ ಅವರು ಮಾತನಾಡಿ; ಕಳೆದ ೩೭ ವರ್ಷಗಳಿಂದ ಶ್ರೀರಾಮನವಮಿಯನ್ನು ಅತ್ಯಂತ ಅದ್ದೂರಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಕೊಡಗು ಜಿಲ್ಲೆಯಲ್ಲಿ ರಾಮನವಮಿ ಆಚರಣೆಯ ಪರಿಕಲ್ಪನೆಯನ್ನು ಮೊದಲು ಹುಟ್ಟು ಹಾಕಿದ್ದು ಶ್ರೀ ಕೋದಂಡ ರಾಮ ದೇವಾಲಯ ಎಂದು ತಿಳಿಸಿದರು.

ಶ್ರೀ ಕೋದಂಡ ರಾಮೋತ್ಸವ ಸಮಿತಿ ವತಿಯಿಂದ ನಡೆಯುವ ರಾಮೋತ್ಸವದಲ್ಲಿ ಎಲ್ಲಾ ಸಮುದಾಯದ ಮಂದಿ ಪಾಲ್ಗೊಳ್ಳಲಿದ್ದಾರೆ. ರಾಜಕೀಯ ರಹಿತವಾಗಿ, ಯಾವುದೇ ಪ್ರಚೋದನೆ ಇಲ್ಲದೆ ಸೌಹಾರ್ದಯುತವಾಗಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದ್ದು, ಅನ್ನಸಂತರ್ಪಣೆಗಾಗಿ ಭಕ್ತರಿಂದ ಅಭೂತಪೂರ್ವ ಸಹಕಾರ ದೊರೆಯುತ್ತಿದೆ ಎಂದರು.

ರಾಮ, ಲಕ್ಷö್ಮಣ, ಸೀತಾ ಹಾಗೂ ಆಂಜನೇಯ ಸಹಿತರಾಗಿ ಮಲ್ಲಿಕಾರ್ಜುನ ನಗರದಲ್ಲಿ ನೆಲೆ ನಿಂತಿರುವ ಶ್ರೀಕೋದಂಡರಾಮ ದೇವಾಲಯ ಜಿಲ್ಲೆಯ ಏಕೈಕ ದೇವಾಲಯವಾಗಿದ್ದು, ರಾಮನಲ್ಲಿ ವಿಶ್ವಶಾಂತಿಗಾಗಿ ಪ್ರಾರ್ಥಿಸಲಾಗಿದೆ. ವಿಶ್ವ ಕಲ್ಯಾಣಕ್ಕಾಗಿ ಪ್ರಾರ್ಥಿಸುವುದು ನಮ್ಮ ಸಂಕಲ್ಪವಾಗಿದೆ. ರಾಮೋತ್ಸವದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು.

ಟ್ರಸ್ಟ್ನ ಮಾಜಿ ಅಧ್ಯಕ್ಷ ಹೆಚ್.ಮಂಜುನಾಥ್ ಮಾತನಾಡಿ; ಶ್ರೀ ಕೋದಂಡ ರಾಮ ದೇವಾಲಯ ಅತ್ಯಂತ ಶಕ್ತಿಶಾಲಿ ಕ್ಷೇತ್ರವಾಗಿದ್ದು, ಹೊರ ರಾಜ್ಯ ಮತ್ತು ಹೊರ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸುತ್ತಾರೆ. ಇಲ್ಲಿ ಪ್ರಾರ್ಥನೆ, ಸೇವೆ ಸಲ್ಲಿಸಿದ ಸಾಕಷ್ಟು ಮಂದಿಯ ಸಮಸ್ಯೆಗಳು ಪರಿಹಾರವಾಗಿರುವ ನಿದರ್ಶನಗಳಿವೆ ಎಂದರು. ತಾ.೨೬ ರಂದು ನಡೆಯುವ ಮೆರವಣಿಗೆಯಲ್ಲಿ ವಿವಿಧ ಸಂಘ ಸಂಸ್ಥೆಗಳು, ದೇವಾಲಯಗಳ ಮೂಲಕ ಮಂಟಪಗಳು ಹೊರಡಲಿವೆ. ಹೊರ ಜಿಲ್ಲೆ, ರಾಜ್ಯಗಳ ಕಲಾ ತಂಡಗಳು ಭಾಗವಹಿಸಲಿವೆ. ಇದರೊಂದಿಗೆ ಭಜನಾ ತಂಡಗಳಿAದ ಕುಣಿತ ಭಜನೆ ಹಾಗೂ ಪಲ್ಲಕ್ಕಿ ಸೇವೆ ಗಮನ ಸೆಳೆಯಲಿದೆ. ಪಲ್ಲಕ್ಕಿಯನ್ನು ರಾಮೋತ್ಸವ ಸಮಿತಿ ಅಧ್ಯಕ್ಷ ಗಣೇಶ್ ಅವರರ ನಿರ್ಮಿಸಿ ದೇವಾಲಯಕ್ಕೆ ಕೊಡುಗೆಯಾಗಿ ನೀಡುತ್ತಿದ್ದಾರೆ ಎಂದರು.

ಸುದ್ದಿಗೋಷ್ಠಿಯಲ್ಲಿ ಸ್ವಾಗತ ಸಮಿತಿ ಅಧ್ಯಕ್ಷ ವಿ.ಎಸ್.ವಿನೋದ್ ಕುಮಾರ್, ಶ್ರೀ ಕೋದಂಡ ರಾಮ ದೇವಾಲಯ ಟ್ರಸ್ಟ್ ನ ಅಧ್ಯಕ್ಷ ಹೆಚ್.ಎನ್.ನಂಜುAಡ ಹಾಗೂ ಶ್ರೀ ಕೋದಂಡ ರಾಮೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಬೊಳ್ಳಜಿರ ಬಿ.ಅಯ್ಯಪ್ಪ ಉಪಸ್ಥಿತರಿದ್ದರು.