ಸುಂಟಿಕೊಪ್ಪ, ಮಾ. ೨೪: ಕೊಡಗು ಜಿಲ್ಲಾ ೧೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಏ. ೨೯, ೩೦ ರಂದು ಸುಂಟಿಕೊಪ್ಪ ಜಿ.ಎಂ.ಪಿ. ಶಾಲಾ ಮೈದಾನದಲ್ಲಿ ನಡೆಯಲಿದೆ.
ಸುಂಟಿಕೊಪ್ಪ ಕೊಡವ ಸಮಾಜದ ಸಭಾಂಗಣದಲ್ಲಿ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಕೇಶವ್ ಕಾಮತ್ ಅಧ್ಯಕ್ಷತೆಯಲ್ಲಿ ಇಂದು ನಡೆದ ಪೂರ್ವಭಾವಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ.
ಸಭೆಯಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ನ ಮಾಜಿ ಅಧ್ಯಕ್ಷ ಟಿ.ಪಿ. ರಮೇಶ್, ಕೊಡಗು ಜಿಲ್ಲೆಯಲ್ಲಿ ತನ್ನದೆ ಆದ ವೈಶಿಷ್ಟö್ಯತೆ ಪರಂಪರೆಯನ್ನು ಹೊಂದಿರುವ ಸುಂಟಿಕೊಪ್ಪ ಹೋಬಳಿಯಲ್ಲಿ ಈ ಸಾಲಿನ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಲಾಗಿದೆ. ಸಮ್ಮೇಳನವು ೨ ದಿನಕಾಲ ನಡೆಯಲಿವೆ. ಏ. ೨೯ ರ ಸಂಜೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ಮತ್ತು ೩೦ ರಂದು ಸಮ್ಮೇಳನದ ಅಂಗವಾಗಿ ವಿವಿಧ ಕಾರ್ಯಕ್ರಮಗಳು ನಡೆಯಲಿವೆ.
ಸಮ್ಮೇಳನಕ್ಕೆ ಅಂದಾಜು ರೂ. ೧೮ ರಿಂದ ೧೯ ಲಕ್ಷ ವೆಚ್ಚ ತಗುಲಲಿದ್ದು ಸಮ್ಮೇಳನವನ್ನು ಅರ್ಥಪೂರ್ಣವಾಗಿ ನಡೆಸಲು ೧೧ ಉಪ ಸಮಿತಿಗಳ ಅಗತ್ಯವಿದೆ. ರೂ. ೫ ಲಕ್ಷ ಅನುದಾನವನ್ನು ಕೇಂದ್ರ ಕನ್ನಡ ಸಾಹಿತ್ಯ ಪರಿಷತ್ ನೀಡುತ್ತದೆ. ಆದರೆ ಈಗಾಗಲೇ ಸರಕಾರದ ನೀತಿ ನಿಯಮಗಳಿಗೆ ಅನುಗುಣವಾಗಿ ಆರ್ಥಿಕ ವರ್ಷ ಮುಗಿದಿದ್ದು ಏ. ೩೦ ರೊಳಗೆ ಲೆಕ್ಕಪತ್ರ ಮಂಡಿಸಬೇಕಾದ ಹಿನ್ನಲೆಯಲ್ಲಿ ಏಪ್ರಿಲ್ ತಿಂಗಳಿನಲ್ಲೇ ಸಮ್ಮೇಳನವನ್ನು ಮಾಡಬೇಕಾಗಿದೆ ಎಂದು ಮಾಹಿತಿ ನೀಡಿದರು.
ಸಭೆಯಲ್ಲಿ ಮಾತನಾಡಿದ ಶಾಲಾ ಶಿಕ್ಷಕ - ಶಿಕ್ಷಕಿಯರು ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಪಿಯುಸಿ ಪರೀಕ್ಷಾ ಮೌಲ್ಯಮಾಪನ ೧ ತಿಂಗಳ ಕಾಲ ನಡೆಯುವ ಜನಗಣತಿ ಕುರಿತು ಮಾಹಿತಿ ನೀಡಿದರಲ್ಲದೆ ಸಮ್ಮೇಳನದ ಯಶಸ್ಸಿಗೆ ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವುದು ಅಸಾಧ್ಯ ಎಂಬ ಅಂಶವನ್ನು ಸಭೆಯ ಗಮನಕ್ಕೆ ತಂದರು. ಈ ವಿಚಾರವನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ಶಿಕ್ಷಣ ಇಲಾಖೆಯ ಮೂಲಕ ಸಮ್ಮೇಳನ ನಡೆಯುವ ೨ ದಿನಗಳ ಮಟ್ಟಿಗೆ ಅನುಮತಿ ಕೊಡಿಸುವ ನಿಟ್ಟಿನಲ್ಲಿ ಪ್ರಯತ್ನಿಸುವುದಾಗಿ ಜಿಲ್ಲಾಡಳಿತದ ಕಾನೂನು ಸಲಹೆಗಾರರಾದ ಎ. ಲೋಕೇಶ್ ಕುಮಾರ್ ಭರವಸೆ ನೀಡಿದ್ದಾರೆ ಎಂದು ಟಿ.ಪಿ. ರಮೇಶ್ ಮಾಹಿತಿ ನೀಡಿದರು.
ಸಮ್ಮೇಳನದ ಯಶಸ್ಸಿಗಾಗಿ ವಿವಿಧ ಉಪಸಮಿತಿಗಳನ್ನು ರಚಿಸಲಾಯಿತು. ವೇದಿಕೆಯಲ್ಲಿ ಸುಂಟಿಕೊಪ್ಪ ಹೋಬಳಿ ಕ.ಸಾ.ಪ. ಅಧ್ಯಕ್ಷ ಪಿ.ಎಫ್. ಸಬಾಸ್ಟೀನ್, ಕುಶಾಲನಗರ ತಾಲೂಕು ಕಸಾಪ ಅಧ್ಯಕ್ಷ ಕೆ.ಎಸ್. ನಾಗೇಶ್, ಜಿಲ್ಲಾ ಗೌರವ ಕಾರ್ಯದರ್ಶಿಗಳಾದ ಎಸ್.ಎ. ಮುನೀರ್ ಆಹ್ಮದ್, ರೇವತಿ ರಮೇಶ್, ಗೌರವ ಕೋಶಾಧಿಕಾರಿ ಎಸ್.ಎಸ್. ಸಂಪತ್‌ಕುಮಾರ್,
೪ಐದನೇ ಪುಟಕ್ಕೆ
(ಮೊದಲ ಪುಟದಿಂದ) ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪಿ.ಆರ್. ಸುನಿಲ್‌ಕುಮಾರ್, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಕೆ.ಎನ್.ದೇವರಾಜ್, ಸುಂಟಿಕೊಪ್ಪ ಹೋಬಳಿ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಅನಿಲ್ ಕುಮಾರ್, ಮಹಿಳಾ ಕಾರ್ಯದರ್ಶಿ ಲೀಲಾ ಮೇದಪ್ಪ, ಮಾಜಿ ಅಧ್ಯಕ್ಷ ಎಂ.ಎಸ್. ಸುನಿಲ್, ಸುಂಟಿಕೊಪ್ಪ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ವಿ.ಜಿ. ಲೋಕೇಶ್, ೭ನೇ ಹೊಸಕೋಟೆ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ನಂದೀಶ್, ಕೊಡಗರಹಳ್ಳಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ ರವೀಶ್, ನಾಕೂರು-ಶಿರಂಗಾಲ ಗ್ರಾ.ಪಂ. ಕಾರ್ಯದರ್ಶಿ ಚಂದ್ರಶೇಖರ್, ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಅಧ್ಯಕ್ಷ ಕಿಟ್ಟಣ್ಣ ರೈ, ಆಟೋ ಚಾಲಕರ ಸಂಘದ ಅಧ್ಯಕ್ಷ ಕೆ.ಎಚ್. ಶರೀಫ್, ಜಿಲ್ಲಾ ಮತ್ತು ತಾಲೂಕು ಹಾಗೂ ಹೋಬಳಿ ಕಸಾಪ ವಿವಿಧ ಪದಾಧಿಕಾರಿಗಳು ಕಸಾಪ ಸದಸ್ಯರುಗಳು ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.