ಮಡಿಕೇರಿ, ಮಾ. ೨೫: ಜಿಲ್ಲಾ ಬಿಜೆಪಿ ವತಿಯಿಂದ ಕೊಡಗು-ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಒಡೆಯರ್ ಹುಟ್ಟುಹಬ್ಬ ಆಚರಿಸಲಾಯಿತು.
ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ನಗರಸಭಾ ಅಧ್ಯಕ್ಷೆ ಕಲಾವತಿ ಸೇರಿದಂತೆ ಇನ್ನಿತರರು ನಗರದ ಓಂಕಾರೇಶ್ವರ ದೇವಾಲಯದಲ್ಲಿ ಯದುವೀರ್ ಅವರ ಒಳಿತಿಗಾಗಿ ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ನಗರದ ಬಾಲಭವನದ ಮಕ್ಕಳಿಗೆ ಪುಸ್ತಕ ಹಾಗೂ ಲೇಖನಿ ವಿತರಿಸಿ, ಭೋಜನದ ವ್ಯವಸ್ಥೆ ಏರ್ಪಡಿಸಲಾಗಿತ್ತು. ಈ ಸಂದರ್ಭ ಮಾಜಿ ಶಾಸಕ ಕೆ.ಜಿ. ಬೋಪಯ್ಯ, ನಗರಸಭಾ ಅಧ್ಯಕ್ಷೆ ಕಲಾವತಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಹೇಶ್ ಜೈನಿ, ವಕ್ತಾರ ಅರುಣ್ ಕುಮಾರ್, ನಗರ ಮಂಡಲ ಪ್ರಧಾನ ಕಾರ್ಯದರ್ಶಿ ಬಿ.ಕೆ. ಜಗದೀಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಪ್ರಮುಖರಾದ ಸವಿತಾ ರಾಕೇಶ್, ಬೊಳ್ಳಜಿರ ಅಯ್ಯಪ್ಪ, ಪೂಣಚ್ಚ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.