ಕೂಡಿಗೆ, ಮಾ. ೨೫: ಕರ್ನಾಟಕ ಸರ್ಕಾರದ ಸಮಗ್ರ ಶಿಕ್ಷಣ ನಿರ್ದೇಶನಾಲಯದ ನಿರ್ದೇಶನದಂತೆ ರಾಜ್ಯದ ೩೪ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಗಳಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಘಟಕವನ್ನು ಸ್ಥಾಪಿಸಲಾಗುತ್ತಿದೆ ಎಂದು ಕೂಡಿಗೆ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ(ಡಯಟ್)ಯ ಪ್ರಾಂಶುಪಾಲಡಿAಜ ರಾಮಚಂದ್ರ ರಾಜೇ ಅರಸ್ ಅವರು ಮಾಹಿತಿ ನೀಡಿದರು.

ಕೂಡಿಗೆ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ವೃತ್ತಿಪರ ಶಿಕ್ಷಣ ಹಾಗೂ ವೃತ್ತಿ ಮಾರ್ಗದರ್ಶನ ಘಟಕವನ್ನು ಆರಂಭಿಸಲಾಗುತ್ತಿದ್ದು ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ ವಿದ್ಯಾರ್ಥಿಗಳಿಗೆ ಅವರ ಆಸಕ್ತಿ ಮತ್ತು ಸಾಮರ್ಥ್ಯಕ್ಕೆ ಅನುಗುಣವಾಗಿ ಮುಂದಿನ ವೃತ್ತಿ ಜೀವನದ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಲು ಇದೇ ತಾ.೨೭ ರಂದು ಬೆಳಿಗ್ಗೆ ೧೦ ಗಂಟೆಯಿAದ ಕೂಡಿಗೆ ಸಂಸ್ಥೆಯ ಆವರಣದಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್)ಮೇಳವನ್ನು ಏರ್ಪಡಿಸಲಾಗಿದೆ ಎಂದು ಅವರು ತಿಳಿಸಿದರು.

ಕೂಡಿಗೆ ಡಯಟ್‌ನಲ್ಲಿ ವೃತ್ತಿ ಶಿಕ್ಷಣ ಪ್ರದರ್ಶನ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್) ಮೇಳದ ಪ್ರಚಾರ ಸಾಮಗ್ರಿ ಹಾಗೂ ಮಾಹಿತಿ ಪತ್ರ ಬಿಡುಗಡೆಗೊಳಿಸಿದ ನಂತರ ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ಶಿಕ್ಷಣ ಪ್ರದರ್ಶನ ಹಾಗೂ ವೃತ್ತಿ ಮಾರ್ಗದರ್ಶನ (ಕೆರಿಯರ್)ಮೇಳದ ಪ್ರಕಟಣೆ ಹಾಗೂ ರೂಪುರೇಷೆ ಕುರಿತು ಅವರು ಮಾಹಿತಿ ನೀಡಿದರು.

ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಹಾಗೂ ವೃತ್ತಿ ಆಯ್ಕೆ ಕುರಿತು ಸಮಗ್ರ ಮಾಹಿತಿಯನ್ನು ಒದಗಿಸುವ ಉದ್ದೇಶದಿಂದ ಕೂಡಿಗೆ ಜಿಲ್ಲಾ ಮತ್ತು ತರಬೇತಿ ಸಂಸ್ಥೆ(ಡಯಟ್) ಜಿಲ್ಲಾ ಮಟ್ಟದ ವೃತ್ತಿ ದಿಕ್ಸೂಚಿ, ವೃತ್ತಿ ಶಿಕ್ಷಣ ಪ್ರದರ್ಶನ ಮತ್ತು ವೃತ್ತಿ ಮಾರ್ಗದರ್ಶನ ಕೆರಿಯರ್ ಮೇಳ ೨೦೨೬ ವನ್ನು ತಾ.೨೭ ರಂದು ಬೆಳಿಗ್ಗೆ ೧೦ ಗಂಟೆಯಿAದ ಸಂಜೆ ೫ ಗಂಟೆಯವರೆಗೆ ಏರ್ಪಡಿಸಲಾಗಿದೆ. ಸಮಗ್ರ ಶಿಕ್ಷಣ ಕರ್ನಾಟಕದ ರಾಜ್ಯ ಯೋಜನಾ ನಿರ್ದೇಶಕರ ಕಛೇರಿಯಿಂದ ನೀಡಿರುವ ಸುತ್ತೋಲೆ ಅನ್ವಯ ಕೂಡಿಗೆ ಡಯಟ್ ಸಂಸ್ಥೆಯಲ್ಲಿ ವೃತ್ತಿಪರ ಮತ್ತು ವೃತ್ತಿ ಮಾರ್ಗದರ್ಶನ ಘಟಕ ಸ್ಥಾಪಿಸಲಾಗುತ್ತಿದ್ದು ಈ ಘಟಕದ ಮೂಲಕ ವಿದ್ಯಾರ್ಥಿಗಳಿಗೆ ನಿರಂತರವಾಗಿ ವೃತ್ತಿ ಮಾರ್ಗದರ್ಶನ ನೀಡಲಾಗುವುದು ಎಂದು ಪ್ರಾಂಶುಪಾಲರು ರಾಮಚಂದ್ರ ರಾಜೇ ಅರಸ್ ತಿಳಿಸಿದರು.

ಈ ವೃತ್ತಿ ಮಾರ್ಗದರ್ಶನ ಮೇಳದಲ್ಲಿ ೧೦ನೇ ತರಗತಿ ಮತ್ತು ೧೨ನೇ ತರಗತಿ ನಂತರದ ಶಿಕ್ಷಣ ಮಾರ್ಗಗಳು, ಜೊತೆಗೆ ಸಿ.ಇ.ಟಿ, ನೀಟ್, ಜೆ.ಇ.ಇ. ಪರೀಕ್ಷೆ ಮುಂತಾದ ಕೋರ್ಸ್ಗಳ ಪ್ರವೇಶ ಪರೀಕ್ಷೆಗಳ ಕುರಿತು ಮಾಹಿತಿ ಹಾಗೂ ಮಾರ್ಗದರ್ಶನ ನೀಡಲಾಗುತ್ತದೆ. ಜಿಲ್ಲೆಯ ವಿವಿಧ ಸರ್ಕಾರಿ ಇಲಾಖೆಗಳು, ಬ್ಯಾಂಕ್‌ಗಳು ಮತ್ತು ಪ್ರತಿಷ್ಠಿತ ಶಿಕ್ಷಣ ಸಂಸ್ಥೆಗಳ ಮಳಿಗೆ (ಸ್ಟಾಲ್)ಗಳನ್ನು ಸ್ಥಾಪಿಸಿ ವಿದ್ಯಾರ್ಥಿಗಳು ಹಾಗೂ ಪೋಷಕರಿಗೆ ಉನ್ನತ ಶಿಕ್ಷಣ ಮತ್ತು ವೃತ್ತಿ ಸಂಬAಧಿಸಿದ ಮಾಹಿತಿಯನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದರು.

೯ ರಿಂದ ೧೨ನೇ ತರಗತಿ ವರೆಗೆ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳು ಸೇರಿದಂತೆ ವೃತ್ತಿಪರ ಕೋರ್ಸ್ಗಳ ವಿದ್ಯಾರ್ಥಿಗಳು, ಅವರ ಪೋಷಕರು, ಮಹಿಳೆಯರು ಹಾಗೂ ಸಾರ್ವಜನಿಕರು ಈ ವೃತ್ತಿ ಮೇಳಕ್ಕೆ ಆಗಮಿಸಿ ಇದರ ಪ್ರಯೋಜನ ಪಡೆಯಲು ಕೋರಿದರು.

ವೃತ್ತಿ ಮೇಳದಲ್ಲಿ ಸಂಪನ್ಮೂಲ ವ್ಯಕ್ತಿಗಳಿಂದ ವಿವಿಧ ವಿಷಯಗಳ ಕುರಿತು ಮಾಹಿತಿ ನೀಡಲಾಗುವುದು ಎಂದು ಅರಸ್ ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಕಾರ್ಯದರ್ಶಿ ಎಚ್.ಎಚ್.ಸತೀಶ್, ಡಿಡಿಪಿಐ ಕಛೇರಿಯ ಉಪ ಯೋಜನಾ ಸಮನ್ವಯಾಧಿಕಾರಿ (ಡಿವೈಪಿಸಿ) ಸೌಮ್ಯ ಪೊನ್ನಪ್ಪ, ಜಿಲ್ಲಾ ಉದ್ಯೋಗಾಧಿಕಾರಿ ಸಿ.ಬಿ ಮಂಜುನಾಥ್, ಮಡಿಕೇರಿ ಬಿ.ಆರ್.ಸಿ ಎಸ್ ಶರ್ಮಿಳಾ, ಡಯಟ್ ಸಂಸ್ಥೆಯ ಹಿರಿಯ ಉಪನ್ಯಾಸಕಿ ಬಿ.ಎನ್ ಪುಷ್ಪ, ಉಪನ್ಯಾಸಕರಾದ ವಿ ವಿಜಯ್, ಕೆ.ಎಸ್ ನಳಿನಾಕ್ಷಿ, ಪಿ.ಪಿ ಗಾಯತ್ರಿ, ಕೂಡ್ಲೂರು ಸರ್ಕಾರಿ ಪ್ರೌಢಶಾಲಾ ಮುಖ್ಯ ಶಿಕ್ಷಕ ಟಿ.ಜಿ ಪ್ರೇಮಕುಮಾರ್, ಸೋಮವಾರಪೇಟೆ ಸರ್ಕಾರಿ ಪಿಯೂ ಕಾಲೇಜಿನ ಪ್ರಾಂಶುಪಾಲ ಬಿ.ಎಂ ಬೆಳ್ಳಿಯಪ್ಪ, ಮಡಿಕೇರಿ ಐಟಿಐ ಕಾಲೇಜಿನ ತರಬೇತಿ ಅಧಿಕಾರಿ ಸಿ.ಕೆ ಇಂದ್ರೇಶ್, ಆಲೂರು ಸಿದ್ದಾಪುರ ಐ.ಟಿ.ಐ ಕಾಲೇಜಿನ ಜೆ.ಟಿ.ಓ. ಎ.ತೇಜಸ್ವಿನಿ ಇದ್ದರು.