ಮಡಿಕೇರಿ, ಮಾ. ೨೬: ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ ನಡೆಯಲಿರುವ ರಾಮನವಮಿ ಉತ್ಸವ ಹಿನ್ನಲೆಯಲ್ಲಿ ತಾ. ೨೭ ರಂದು ಬೆಳಿಗ್ಗೆ ೬ ಗಂಟೆಯಿAದ ಮಧ್ಯರಾತ್ರಿ ೧೨ ಗಂಟೆಯವರೆಗೆ ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಅಬ್ಬೂರಕಟ್ಟೆ ಗ್ರಾಮ, ಐಗೂರು ಗ್ರಾಮ ಮತ್ತು ಮಾದಾಪುರ ಗ್ರಾಮ ಹಾಗೂ ಅದರ ಸುತ್ತಮುತ್ತಲಿನ ೧ ಕಿ.ಮೀ. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಹಾಗೂ ಹೋಮ್ ಮೇಡ್ ವೈನ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
* ಮಡಿಕೇರಿ ತಾಲೂಕಿನ ನಾಪೋಕ್ಲುವಿನಲ್ಲಿ ನಡೆಯಲಿರುವ ಹಿಂದೂ ಜನ ಜಾಗೃತಿ ಸಮಾವೇಶ ಕಾರ್ಯಕ್ರಮದ ಹಿನ್ನಲೆಯಲ್ಲಿ ಸಾರ್ವಜನಿಕ ಹಿತಾಸಕ್ತಿಯಿಂದ ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಸಲುವಾಗಿ ಅಬಕಾರಿ ಕಾಯ್ದೆ ೧೯೬೫ರ ಕಲಂ ೨೧ ರಲ್ಲಿ ದತ್ತವಾಗಿರುವ ಅಧಿಕಾರದಂತೆ ಏಪ್ರಿಲ್ ೧ ರಂದು ಬೆಳಿಗ್ಗೆ ೬ ಗಂಟೆಯಿAದ ಮಧ್ಯರಾತ್ರಿ ೧೨ ಗಂಟೆಯವರೆಗೆ ನಾಪೋಕ್ಲು ಹಾಗೂ ಅದರ ಸುತ್ತಮುತ್ತಲಿನ ೦೧ ಕಿ.ಮೀ. ವ್ಯಾಪ್ತಿಯಲ್ಲಿ ಎಲ್ಲಾ ರೀತಿಯ ಮದ್ಯದ ಅಂಗಡಿ, ಬಾರ್, ಹೊಟೇಲ್ ಮತ್ತು ಕ್ಲಬ್ಗಳಲ್ಲಿ ಎಲ್ಲಾ ವಿಧದ ಮದ್ಯ ಹಾಗೂ ಹೋಮ್ಮೇಡ್ ವೈನ್ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ಆದೇಶ ಹೊರಡಿಸಿದ್ದಾರೆ.