ಮಡಿಕೇರಿ, ಮಾ. ೨೭: ಪ್ರವಾಸಿಗರ ಕೇಂದ್ರಬಿAದು ರಾಜಾಸೀಟು ಉದ್ಯಾನವನಕ್ಕೆ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಶುಕ್ರವಾರ ಭೇಟಿ ನೀಡಿ ಪರಿಶೀಲಿಸಿದರು.
ಗ್ರೇಟರ್ ರಾಜಾಸೀಟು, ಪುಟಾಣಿ ರೈಲು ಮಾರ್ಗ ಮತ್ತು ಕೂರ್ಗ್ ವಿಲೇಜ್‌ಗೆ ತೆರಳಿ ಅಭಿವೃದ್ಧಿ ಸಂಬAಧ ಮಾಹಿತಿ ಪಡೆದರು.
ರಾಜಾಸೀಟು ಉದ್ಯಾನವನ ಬಳಿಯ ಟಿಕೆಟ್ ಕೌಂಟರ್, ಮಾಹಿತಿ ಕೇಂದ್ರ ಹಾಗೂ ಉದ್ಯಾನವನದೊಳಗೆ ಸಿಸಿಟಿವಿ ಹಾಗೂ ಗೇಟ್‌ಅನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಉದ್ಯಾನವನ ಸುತ್ತಲೂ ಸಿಸಿಟಿವಿ ವೈರ್ ಹಾಗೂ ವಿದ್ಯುತ್ ತಂತಿಗಳಿAದ ಕೂಡಿದ್ದು, ಉದ್ಯಾನವನದ ಸೌಂದರ್ಯ ಹಾಳಾಗಿದೆ. ಆದ್ದರಿಂದ ಕೂಡಲೇ ಎಲ್ಲಾ ದುರಸ್ತಿ ಕಾರ್ಯ, ಭೂಮಿಯ ಒಳಭಾಗದಲ್ಲಿ ತಂತಿ ಅಳವಡಿಸುವುದು ಹಾಗೂ ದೀಪಗಳನ್ನು ದುರಸ್ತಿಪಡಿಸಿ ಅಲಂಕಾರಿಕ ದೀಪಗಳನ್ನು ಅಳವಡಿಸುವುದು ಸೇರಿದಂತೆ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತೆ ತೋಟಗಾರಿಕೆ ಉಪ ನಿರ್ದೇಶಕರಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.
ಪುಟಾಣಿ ರೈಲು ಆರಂಭಕ್ಕೆ ಅಗತ್ಯ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು. ಕೂರ್ಗ್ ವಿಲೇಜ್‌ನಲ್ಲಿರುವ ಮಳಿಗೆ ವೀಕ್ಷಿಸಿದ ಜಿಲ್ಲಾಧಿಕಾರಿ, ಈ ಮಳಿಗೆ ಪ್ರದೇಶದಲ್ಲಿ ಮಾವು ಮೇಳ, ಫಲಪುಷ್ಪ ಪ್ರದರ್ಶನ ಮತ್ತು ಇತರೆ ಇಲಾಖೆಗಳಲ್ಲಿ ನಡೆಸುವ ಮೇಳಗಳನ್ನು ಆಯೋಜಿಸಲು ಇಲಾಖೆಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮವಹಿಸುವಂತೆ ನಿರ್ದೇಶನ ನೀಡಿದರು.
ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಶಶಿಧರ ಅವರು ರಾಜಾಸೀಟು ಉದ್ಯಾನವನ ಅಭಿವೃದ್ಧಿ, ಗ್ರೇಟರ್ ರಾಜಾಸೀಟು ಬೆಳವಣಿಗೆ, ಕೂರ್ಗ್ ವಿಲೇಜ್ ಅಭಿವೃದ್ಧಿ ಸಂಬAಧಿಸಿದAತೆ ಮಾಹಿತಿ ನೀಡಿದರು. ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಮುತ್ತಪ್ಪ ಇತರರು ಇದ್ದರು.