ಚೆಯ್ಯಂಡಾಣೆ, ಮಾ. ೨೭: ಸ್ಥಳೀಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವ್ಯಾಸಂಗ ಮಾಡಿದ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಇತ್ತೀಚೆಗೆ ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಗಿತ್ತು.

ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಪ್ರಬಾರ ಮುಖ್ಯ ಶಿಕ್ಷಕಿ ವಿಮಲಾ ವಹಿಸಿ ಮಾತನಾಡಿದರು. ಶಾಲೆಯ ಹಿರಿಯ ಶಿಕ್ಷಕಿ ಜಯಪ್ರದ ಹಾಗೂ ಅತಿಥಿ ಶಿಕ್ಷಕಿ ಸತ್ಯಮ್ಮ ವಿದ್ಯಾರ್ಥಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಮಾತನಾಡಿ, ಇನ್ನು ನಿಮ್ಮ ಮುಂದಿನ ವಿದ್ಯಾಭ್ಯಾಸ ಯಶಸ್ಸು ಕಾಣಲಿ ಎಂದು ಶುಭ ಹಾರೈಸಿದರು.

ವಿದ್ಯಾರ್ಥಿಗಳು ಶಿಕ್ಷಕರ ಹಾಗೂ ಶಾಲೆಯ ಬಗ್ಗೆ ಮೆಚ್ಚುಗೆಯ ಅನಿಸಿಕೆ ವ್ಯಕ್ತಪಡಿಸಿ ಮಾತನಾಡಿದರು. ಈ ಸಂದರ್ಭ ಶಿಕ್ಷಕ ವೃಂದ, ಸಿಬ್ಬಂದಿಗಳು ಉಪಸ್ಥಿತರಿದ್ದರು.