ಕುಶಾಲನಗರ, ಮಾ. ೨೭: ಕುಶಾಲನಗರ ಒಳಚರಂಡಿ ಯೋಜನೆ ಮತ್ತು ಅಮೃತ್ ೨ ನಿರಂತರ ಕುಡಿಯುವ ನೀರಿನ ಸರಬರಾಜು ಯೋಜನೆಯ ಪ್ರಗತಿ ಪರಿಶೀಲನಾ ಸಭೆ ಬೆಂಗಳೂರಿನಲ್ಲಿ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅಧ್ಯಕ್ಷತೆಯಲ್ಲಿ ನಡೆಯಿತು.
ಬೆಂಗಳೂರಿನ ಶಾಸಕರ ಭವನದಲ್ಲಿ ಕುಶಾಲನಗರ ಪುರಸಭೆ ಅಧಿಕಾರಿಗಳು ಮತ್ತು ಒಳಚರಂಡಿ ಯೋಜನೆಯ ಅಧಿಕಾರಿಗಳು ಮತ್ತು ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷÀ ಪ್ರಮೋದ್ ಮುತ್ತಪ್ಪ ಅವರ ಉಪಸ್ಥಿತಿಯಲ್ಲಿ ಶಾಸಕರು ಕಾಮಗಾರಿಗಳ ಬಗ್ಗೆ ಸಮಗ್ರ ಮಾಹಿತಿ ಪಡೆದರು.
ಕುಶಾಲನಗರ ಒಳಚರಂಡಿ ಯೋಜನೆ ಕಳೆದ ೨೦೧೪ರಿಂದ ಆರಂಭಗೊAಡಿದ್ದು, ಸುಮಾರು ೪೩ ಕೋಟಿ ವೆಚ್ಚದಲ್ಲಿ ಆರಂಭಗೊAಡ ಯೋಜನೆಯ ಪ್ರಥಮ ಹಂತದ ಕಾಮಗಾರಿ ಅಂತ್ಯಗೊAಡಿದ್ದು, ಎರಡನೇ ಹಂತದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಹಾಗೂ ಕುಶಾಲನಗರ ಮುಖ್ಯ ರಸ್ತೆಯಲ್ಲಿ ಸಂಪರ್ಕ ಕೊಳವೆಗಳನ್ನು ಅಳವಡಿಸುವ ಕಾಮಗಾರಿ ಬಹುತೇಕ ಪೂರ್ಣಗೊಂಡಿದೆ. ಗುಮ್ಮನಕೊಲ್ಲಿ ಬಳಿ ವೆಟ್‌ವೆಲ್ ನಿರ್ಮಾಣ ಕಾಮಗಾರಿ ಬಾಕಿ ಉಳಿದಿದ್ದು ಸದ್ಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕಾರ್ಯ ಯೋಜನೆ ರೂಪಿಸಲಾಗಿದೆ ಎಂದು ಕರ್ನಾಟಕ ನೀರು ಸರಬರಾಜು ಮಂಡಳಿ ಮತ್ತು ಒಳಚರಂಡಿ ಯೋಜನೆಯ ಕಾರ್ಯಪಾಲಕ ಅಭಿಯಂತರ ಉಮೇಶ್ ಚಂದ್ರ ಮಾಹಿತಿ ಒದಗಿಸಿದರು. ಏಪ್ರಿಲ್ ೧೫ಕ್ಕೆ ಕುಶಾಲನಗರ ಒಳಚರಂಡಿ ಕಾಮಗಾರಿ ಸಂಪೂರ್ಣಗೊಳಿಸಿ ಲೋಕಾರ್ಪಣೆಗೆ ಸಿದ್ಧಗೊಳಿಸುವಂತೆ ಶಾಸಕ ಡಾ ಮಂತರ್ ಗೌಡ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕುಶಾಲನಗರ ಮತ್ತು ಪಿರಿಯಾಪಟ್ಟಣ ಭಾಗಗಳಿಗೆ ಅಮೃತ್ ೨ ಕುಡಿಯುವ ನೀರಿನ ಯೋಜನೆ ಕಾಮಗಾರಿ ಭರದಿಂದ ಸಾಗುತ್ತಿದ್ದು ಈಗಾಗಲೇ ಅನುಮೋದನೆಗೊಂಡಿರುವ ಟೆಂಡರ್ ಕಾಮಗಾರಿ ಪೂರ್ಣಗೊಂಡಿದೆ. ನದಿ ಭಾಗದಲ್ಲಿ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ೪ಏಳನೇ ಪುಟಕ್ಕೆ
(ಮೊದಲ ಪುಟದಿಂದ) ನಿಗದಿತ ಕಾಲಾವಧಿಯಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ. ಅಕ್ಟೋಬರ್ ಅಂತ್ಯದೊಳಗೆ ಅಮೃತ್ ೨ ಯೋಜನೆ ಕಾಮಗಾರಿ ಪೂರ್ಣಗೊಳ್ಳುವ ಬಗ್ಗೆ ಸಭೆಗೆ ಅಧಿಕಾರಿಗಳು ಮಾಹಿತಿ ನೀಡಿದರು.
ಸಭೆಯಲ್ಲಿ ಒಳಚರಂಡಿ ಯೋಜನೆಯ ಸಹಾಯಕ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್, ಕುಶಾಲನಗರ ಪುರಸಭೆ ಮುಖ್ಯ ಅಧಿಕಾರಿ ಟಿ.ಎಸ್. ಗಿರೀಶ್, ಹಿರಿಯ ಆರೋಗ್ಯ ಅಧಿಕಾರಿ ಉದಯಕುಮಾರ್ ಮತ್ತಿತರರು ಇದ್ದರು.