ಸೋಮವಾರಪೇಟೆ, ಮಾ. ೨೯: ಇಲ್ಲಿನ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಮಹಾಮಂಡಲದ ಟಿಯುಸಿಸಿ ಸಂಘಟನೆಯ ವಾರ್ಷಿಕ ಮಹಾಸಭೆ ಹಾಗೂ ಮಹಿಳಾ ದಿನಾಚರಣೆ ಕಾರ್ಯಕ್ರಮ ತಾಲೂಕು ಸ್ತಿçà ಶಕ್ತಿ ಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಶ್ರೀದೇವಿ ಬಿ. ಮುದೋಳ ಉದ್ಘಾಟಿಸಿದರು. ನಂತರ ಮಾತನಾಡಿ, ಎಲ್ಲರೂ ಒಗ್ಗಟ್ಟಾಗಿ ಹೋರಾಡಿದಲ್ಲಿ ಮಾತ್ರ ನಮಗೆ ಸಿಗುವ ಸವಲತ್ತುಗಳನ್ನು ಪಡೆಯಲು ಸಾಧ್ಯ. ಯಾವುದೇ ಇಲಾಖೆಯಲ್ಲಿ ಮೇಲಧಿಕಾರಿಗಳ ಸಹಕಾರದೊಂದಿಗೆ ಎಲ್ಲರೂ ಕೆಲಸ ಮಾಡಬೇಕಿದ್ದು, ಒತ್ತಡದಿಂದ ನಿರಂತರವಾಗಿ ಕೆಲಸ ಮಾಡಬೇಕಿದೆ. ಇದರಿಂದಾಗಿ ನಮಗೆ ಮತ್ತು ಕುಟುಂಬಕ್ಕೆ ಸಮಯ ವಿನಿಯೋಗಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ ಎಂದರು.

ಅAಗನವಾಡಿಗಳು ಎಲ್ಲ ಗ್ರಾಮಗಳಲ್ಲಿ ಸೇವೆ ಸಲ್ಲಿಸುತ್ತಿರುವ ಪ್ರಮುಖ ಕೇಂದ್ರವಾಗಿದೆ. ಇತ್ತೀಚಿನ ದಿನಗಳಲ್ಲಿ ಕೆಲವು ಅಂಗನವಾಡಿ ಕೇಂದ್ರಗಳು ಮಕ್ಕಳ ಕೊರತೆಯನ್ನು ಎದುರಿಸುತ್ತಿವೆ. ಅದಕ್ಕಾಗಿ ಚಿಕ್ಕ ಮಕ್ಕಳನ್ನು ತಿದ್ದಿ ತೀಡುವ ಕೆಲಸ ಮಾಡುತ್ತಿರುವ ಅಂಗನವಾಡಿಗಳಲ್ಲಿ ಎಲ್‌ಕೆಜಿ ಮತ್ತು ಯುಕೆಜಿವರೆಗಿನ ಶಿಕ್ಷಣಕ್ಕೆ ಅವಕಾಶ ಮಾಡಿಕೊಡಬೇಕು. ಇದರೊಂದಿಗೆ ತರಗತಿ ನಡೆಸಲು ಎಲ್ಲ ರೀತಿಯ ಸವಲತ್ತುಗಳನ್ನು ಸರ್ಕಾರ ನೀಡಬೇಕೆಂದು ಒತ್ತಾಯಿಸಿದರು.

ಅಂಗನವಾಡಿ ನಿವೃತ್ತ ಶಿಕ್ಷಕಿ ಶಾರದ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಊರಿನ ತಾಯಿಯಾಗಿ ಕೆಲಸ ಮಾಡಬೇಕು. ನಮ್ಮ ಅವಧಿಯಲ್ಲಿ ಅಂಗನವಾಡಿ ಕೇಂದ್ರಗಳನ್ನು ಸ್ವಂತ ಮನೆಗಳಂತೆ ನಿರ್ವಹಿಸುತ್ತಿದ್ದೆವು. ಗರ್ಭಿಣಿ, ಬಾಣಂತಿಯರು, ಮಕ್ಕಳು ಸೇರಿದಂತೆ ಎಲ್ಲರ ಸೇವೆಯನ್ನು ಮಾಡಲಾಗುತ್ತಿದೆ. ಯಾವುದೇ ಶಿಕ್ಷಕಿ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದಲ್ಲಿ ಮೇಲಧಿಕಾರಿಗಳಿಗೆ ಹೆದರುವ ಅವಶ್ಯಕತೆ ಇರುವುದಿಲ್ಲ ಎಂದರು.

ಹಿAದೆ ಬಹಳ ಕಡಿಮೆ ಸಂಖ್ಯೆಯಲ್ಲಿದ್ದ ಅಂಗನವಾಡಿ ಕೇಂದ್ರಗಳು ದಿನಕಳೆದಂತೆ ಎಲ್ಲೆಡೆ ಹೆಚ್ಜಾಗಿವೆ. ಊರಿನವರೊಂದಿಗೆ ಹೊಂದಾಣಿಕೆಯಿAದ ನಮ್ಮ ಕೇಂದ್ರದ ಸುತ್ತಲಿನ ಸಮಸ್ಯೆಗಳನ್ನು ಪರಿಹರಿಸಲು ಪ್ರಾಮಾಣಿಕ ಕೆಲಸ ಮಾಡಿದಲ್ಲಿ ಮಾತ್ರ ನಮ್ಮ ಕೆಲಸದಲ್ಲಿ ಯಶಸ್ವಿಯಾಗಲು ಸಾಧ್ಯ ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಶ್ರೀದೇವಿ ಬಿ. ಮುದೋಳ, ಸಾವಿತ್ರವ್ವ ಮರಿಗೌಡ ಹಾಗೂ ನಿವೃತ್ತ ಅಂಗನವಾಡಿ ಶಿಕ್ಷಕಿ ಕೆ.ಕೆ. ಶಾರದ ಅವರುಗಳನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಟಿಯುಸಿಸಿ ತಾಲೂಕು ಘಟಕದ ಅಧ್ಯಕ್ಷೆ ಧನಲಕ್ಷಿö್ಮÃ ವಹಿಸಿದ್ದರು. ವೇದಿಕೆಯಲ್ಲಿ ಟಿಯುಸಿಸಿ ಉಪಾಧ್ಯಕ್ಷೆ ಜಯ, ಪ್ರಧಾನ ಕಾರ್ಯದರ್ಶಿ ತಾರಾ ಲೋಬೋ, ಖಜಾಂಚಿ ಗೀತ ಇದ್ದರು.