ಮಡಿಕೇರಿ, ಮಾ.೩೦: ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಪದ್ಮಭೂಷಣ ಜ. ಕೆ.ಎಸ್.ತಿಮ್ಮಯ್ಯ ಅವರ ಜನ್ಮ ದಿನಾಚರಣೆ ತಾ.೩೧ ರಂದು ಬೆಳಿಗ್ಗೆ ೧೦.೩೦ ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಸ್ಮಾರಕ ಭವನ (ಸನ್ನಿಸೈಡ್)ದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ತಿಳಿಸಿದ್ದಾರೆ.