ಮುಳ್ಳೂರು, ಏ. ೨: ‘ಶಿಕ್ಷಣದಿಂದ ಗುರಿ ಸಾಧಿಸಲು ಮತ್ತು ಸಮಾಜವನ್ನು ಬದಲಾವಣೆ ಮಾಡಲು ಸಾಧ್ಯವಾಗುತ್ತದೆ’ ಎಂದು ಚಿಕ್ಕಅಳುವಾರದ ಕೊಡಗು ವಿ.ವಿ. ನಿಲಯದ ಉಪನ್ಯಾಸಕ ಡಾ. ಜಮೀರ್ ಅಹಮ್ಮದ್ ಅಭಿಪ್ರಾಯಪಟ್ಟರು.

ಅವರು ಸಮೀಪದ ಶನಿವಾರಸಂತೆ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸ್ಥಳೀಯ ಭಾರತಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟಿçÃಯ ಸೇವಾ ಯೋಜನೆ ಘಟಕದ ವತಿಯಿಂದ ಹಮ್ಮಿಕೊಂಡಿದ್ದ ೨೦೨೫-೨೬ನೇ ಸಾಲಿನ ವಾರ್ಷಿಕ ಶಿಬಿರದ ಮುಕ್ತಾಯ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.

ವಿದ್ಯಾಸಂಸ್ಥೆ ನಿರ್ದೇಶಕ ಎ.ಎಂ. ಆನಂದ್ ಮಾತನಾಡಿ, ವಿದ್ಯಾರ್ಥಿಗಳು ಶಿಕ್ಷಣದ ಜೊತೆಯಲ್ಲಿ ವಿನಯವಂತಿಕೆ, ಸಂಸ್ಕಾರವನ್ನು ಬೆಳೆಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಶಿಬಿರಾರ್ಥಿಗಳಿಗೆ ರಾಷ್ಟಿçÃಯ ಸೇವಾ ಶಿಬಿರವು ಸಹಕಾರಿಯಾಗುತ್ತದೆ ಎಂದರು.

ಕಾಲೇಜಿನ ಪ್ರಾಂಶುಪಾಲ ಎಸ್.ಎನ್. ಮೋಹನ್ ಕುಮಾರ್ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿ, ವಿದ್ಯಾರ್ಥಿಗಳು ಶಿಬಿರದಲ್ಲಿ ಕಲಿತಿರುವುದುದನ್ನು ಜೀವನದ ಉದ್ದಕ್ಕೂ ಅಳವಡಿಸಿಕೊಳ್ಳುವಂತೆ ಸಲಹೆ ನೀಡಿದರು.

ಸಮಾರಂಭದಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಮಹಮ್ಮದ್ ಪಾಷ, ಗೌರವ ಕಾರ್ಯದರ್ಶಿ ಎನ್.ಕೆ. ಅಪ್ಪಸ್ವಾಮಿ, ನಿರ್ದೇಶಕ ಎನ್.ಜಿ. ಅರುಣ್, ಶಿಬಿರಾಧಿಕಾರಿ ಎಂ.ಎನ್. ಹರೀಶ್ ಮಾಗಲು, ಉಪನ್ಯಾಸಕ ಬಿ.ಎಂ. ಪೊನ್ನಪ್ಪ, ಶಾಲಾ ಎಸ್‌ಡಿಎಂಸಿ ಸದಸ್ಯೆ ಪೂಜಾ ಮುಂತಾದವರು ಹಾಜರಿದ್ದರು.