ಕೂಡಿಗೆ, ಏ. ೨: ತಾಲೂಕು ಪಂಚಾಯಿತಿ ಕುಶಾಲನಗರ, ತೊರೆನೂರು ಗ್ರಾಮ ಪಂಚಾಯಿತಿ, ತೊರೆನೂರು ಸಂಜೀವಿನಿ ಒಕ್ಕೂಟ ವತಿಯಿಂದ ತೊರೆನೂರುವಿನ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಸಂಜೀವಿನಿ ಸಂತೆ ಮೇಳ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನುದ್ದೇಶಿಸಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ರೂಪ ಮಹೇಶ್ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ಸಂತೆ ಮೇಳಗಳು ನಡೆಯುವ ಮೂಲಕ ಮಹಿಳೆಯರು ಜ್ಞಾನದ ಜೊತೆಯಲ್ಲಿ ಆರ್ಥಿಕವಾಗಿ ಮುಂದುವರೆಯಲು ಸಹಕಾರ ಎಂದರು.

ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯ ಕೆ.ಎಸ್ ಕೃಷ್ಣೆಗೌಡ ಮಾತನಾಡಿ, ಸಂಜೀವಿನಿ ಯೋಜನೆಯ ಅಡಿಯಲ್ಲಿ ತಮ್ಮ ಮನೆಗಳಲ್ಲಿ ಗೃಹೋಪಯೋಗಿ ವಸ್ತುಗಳು, ಕರಕುಶಲ ವಸ್ತುಗಳ ತಯಾರಿಕೆಗೆ ಯೋಜನೆಯ ಸವಲತ್ತುಗಳನ್ನು ಪಡೆದುಕೊಳ್ಳಬೇಕು. ಇದರ ಮೂಲಕ ಮಹಿಳೆಯರು ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬಹುದೆಂದರು.

ಜಿಲ್ಲಾ ಕೆ.ಡಿ.ಪಿ ಸದಸ್ಯ ಜಗದೀಶ್ ಮಾತನಾಡಿ, ಮಹಿಳೆಯರು ಸ್ವ-ಉದ್ಯೋಗಿಗಳಾಗಲು ಇಂತಹ ಯೋಜನೆ ಸಹಕಾರಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ತೊರೆನೂರು ಸಂಜೀವಿನಿ ಒಕ್ಕೂಟದ ಅಧ್ಯಕ್ಷೆ ಮಹಾದೇವಮ್ಮ, ಉಪಾಧ್ಯಕ್ಷೆ ವಿಮಲಾ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯೆ ನಿಂಗಜಮ್ಮ, ಸಹಕಾರ ಸಂಘದ ನಿರ್ದೇಶಕ ರವಿಚಂದ್ರ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ಯಾಮ್, ಕಾರ್ಯದರ್ಶಿ ಹರಿಣಿ, ಖಜಾಂಚಿ ವೀಣಾ, ಸಂಜೀವಿನಿ ಯೋಜನೆಯ ತಾಲೂಕು ಮಟ್ಟದ ಜಯಂತ್, ಭವ್ಯ, ಸಂಜೀವಿನಿ ಒಕ್ಕೂಟದ ಎಂ.ಬಿ.ಕೆ ಸುಮಲತಾ, ಎಲ್.ಸಿ.ಆರ್.ಪಿ ರಮ್ಯ, ಪಶುಸಕಿ ಸೌಮ್ಯ, ಕೃಷಿಸಕಿ ಸುಮಲತಾ ಸೇರಿದಂತೆ ಸ್ವಸಹಾಯ ಸಂಘದ ಸದಸ್ಯರು, ವಿವಿಧ ಸಂಘಟನೆಗಳ ಮಹಿಳೆಯರು ಭಾಗವಹಿಸಿದ್ದರು.