ಕೂಡಿಗೆ, ಏ. ೨: ಶ್ರೀ ರಾಮಲಿಂಗೇಶ್ವರ ಸ್ವಾಮಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ ಮತ್ತು ಅದಕ್ಕೆ ಸಂಬAಧಿಸಿದAತೆ ಕಾಮಗಾರಿಗಳನ್ನು ಕೈಗೊಳ್ಳುವ ಉದ್ದೇಶಕ್ಕಾಗಿ ಈ ಸಾಲಿನ ಶಾಸಕರ ಅನುದಾನದಲ್ಲಿ ರೂ. ೧೦ ಲಕ್ಷಗಳನ್ನು ನೀಡುವುದಾಗಿ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರು ಶ್ರೀ ರಾಮಲಿಂಗೇಶ್ವರ ಸ್ವಾಮಿ ಬ್ರಹ್ಮರಥೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ತಿಳಿಸಿದರು.

ಮುಂದಿನ ದಿನಗಳಲ್ಲಿ ನೀರಾವರಿ ಇಲಾಖೆಯ ಮುಖೇನ ಈಗಾಗಲೇ ಕೈಗೊಳ್ಳಲಾಗಿರುವ ಕ್ರಿಯಾ ಯೋಜನೆ ಅನುಗುಣವಾಗಿ ರೂ. ೫ ಕೋಟಿ ವೆಚ್ಚದ ಕಾಮಗಾರಿಯ ಮೂಲಕ ದೇವಾಲಯ ಮುಂಭಾಗದ ತಡೆಗೋಡೆ, ಸೇರಿದಂತೆ ಪ್ರಮುಖ ಕಾಮಗಾರಿಯನ್ನು ಕೈಗೊಳ್ಳಲಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಮುಖ್ಯ ಅತಿಥಿಗಳಾಗಿ ಅಗಮಿಸಿದ್ದ ಕುಶಾಲನಗರ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್ ಮಾತನಾಡಿ, ಗ್ರಾಮಾಂತರ ಪ್ರದೇಶಗಳಲ್ಲಿ ನಡೆಯುವ ಜಾತ್ರೋತ್ಸವಗಳ ಆಚರಣೆಯ ಮೂಲಕ ಗ್ರಾಮಗಳ ನಡುವೆ ಸೌಹಾರ್ದ ಮನೋಭಾವ ಬೆಳೆಸಿಕೊಳ್ಳುವ ಮೂಲಕ ಒಗ್ಗೂಡಿ ಕಾರ್ಯನಿರ್ವಹಿಸುವ ಮುಖೇನ ಧಾರ್ಮಿಕ ಕಾರ್ಯಗಳ ನಿರ್ವಹಣೆ, ದೇವಾಲಯದ ಅಭಿವೃದ್ಧಿಗೆ ಪೂರಕವಾಗುವುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ಕುಶಾಲನಗರದ ಸಾಗರ್ ಮೆಲೋಡಿಸ್ ಆರ್ಕೆಸ್ಟಾç ಕಾರ್ಯಕ್ರಮ ಕರ್ನಾಟಕ ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಚೇತನ್ ಪ್ರಾಯೋಜಕತ್ವದಲ್ಲಿ ನೆರವೇರಿತು.

ಈ ಸಂದರ್ಭ ಹೆಬ್ಬಾಲೆ ಗ್ರಾಮ ಪಂಚಾಯಿತಿ ಸದಸ್ಯರಾದ ವೆಂಕಟೇಶ್, ಶಿವನಂಜಪ್ಪ ಕಣಿವೆಯ ಧಾರ್ಮಿಕ ಹಿನ್ನೆಲೆ ಮತ್ತು ಅಭಿವೃದ್ಧಿ ಪೂರಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಕಬಡ್ಡಿ ಪಂದ್ಯಾವಳಿಯ ಬಹುಮಾನ ವಿತರಣೆ ಮತ್ತು ಕಣಿವೆ ವ್ಯಾಪ್ತಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾಭ್ಯಾಸದಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಬಹುಮಾನವನ್ನು ಶಾಸಕ ಮಂತರ್ ಗೌಡ ವಿತರಣೆ ನೆರವೇರಿಸಿದರು.

ವೇದಿಕೆಯಲ್ಲಿ ಕೆ.ಪಿ.ಸಿ.ಸಿ. ಸದಸ್ಯರಾದ ಮಂಜುನಾಥ ಗುಂಡೂರಾವ್, ನಟೇಶ್ ಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಹೆಚ್.ಎಸ್. ಅಶೋಕ್, ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಕಾರ್ಯದರ್ಶಿ ಚೇತನ್, ಜಿಲ್ಲಾ ಯೂನಿಯನ್ ಸಹಕಾರ ಸಂಘದ ನಿರ್ದೇಶಕ ಎಸ್.ಆರ್. ಸುನಿಲ್ ರಾವ್, ಕುಶಾಲನಗರ ರೋಟರಿ ಕ್ಲಬ್ ಕಾರ್ಯದರ್ಶಿ ಮಂಜುನಾಥ, ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯರಾದ ಅನಂತ, ವೆಂಕಟೇಶ್, ಶಿವನಂಜಪ್ಪ, ರಮೇಶ್, ಲತಾ, ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್. ಸುರೇಶ್, ಉಪಾಧ್ಯಕ್ಷ ಮಂಜುನಾಥ ಸ್ವಾಮಿ, ಕಾರ್ಯದರ್ಶಿ ಮಾಧವ, ನಿರ್ದೇಶಕರಾದ ಆರ್.ಆರ್. ಮಧು, ಶಿರಗಜೆ ನವೀನ್, ಕೆ.ಎಂ. ರಾಕೇಶ್, ಸೇರಿದಂತೆ ಇನ್ನಿತರರು ಹಾಜರಿದ್ದರು.