ಮಡಿಕೇರಿ, ಏ. 3: ಗೋಣಿಕೊಪ್ಪಲುವಿನ ಕಾವೇರಿ ಪೊಮ್ಮಕ್ಕಡ ಕೂಟದ ವತಿಯಿಂದ ಪೊನ್ನಂಪೇಟೆ ಕೊಡವ ಸಮಾಜದಲ್ಲಿ 4ನೇ ವರ್ಷದ ಮೀನ್ಯಾರ್ ನಮ್ಮೆ ಕಾರ್ಯಕ್ರಮ ಸಂಭ್ರಮದಿಂದ ಜರುಗಿತು.

ಕೂಟದ ಅಧ್ಯಕ್ಷೆ ಕೊಟ್ಟಂಗಡ ವಿಜು ದೇವಯ್ಯ ಅಧ್ಯಕ್ಷತೆಯಲ್ಲಿ ದಿನವಿಡೀ ವೈವಿಧ್ಯಮಯ ಕಾರ್ಯಕ್ರಮ ಜರುಗಿದವು. ಕಾರ್ಯಕ್ರಮವನ್ನು ಶಾಸಕರ ಪತ್ನಿ, ಅಜ್ಜಿಕುಟ್ಟಿರ ಕಾಂಚನ್ ಪೊನ್ನಣ್ಣ ಅವರು ಉದ್ಘಾಟಿಸಿದರು.

ಶಾಸಕ ಪೊನ್ನಣ್ಣ ಸೇರಿದಂತೆ ಕಾವೇರಿ ಪೊಮ್ಮಕ್ಕಡ ಕೂಟದ ಪದಾಧಿಕಾರಿಗಳು, ಸದಸ್ಯರು ಪಾಲ್ಗೊಂಡಿದ್ದರು. ಮಾರಾಟ ಮೇಳ, ಆಹಾರ ಮೇಳ ಸೇರಿದಂತೆ ವೈವಿಧ್ಯಮಯ ಸಾಂಸ್ಕøತಿಕ ಕಾರ್ಯಕ್ರಮಗಳಲಿ ಮಹಿಳೆಯರು ತೊಡಗಿಸಿಕೊಂಡಿದ್ದರು.

ಕೆಪಿಟಿಸಿಎಲ್‍ನ ಚೀಫ್ ಇಲೆಕ್ಟ್ರಿಕಲ್ ಆಫೀಸರ್ ತೀತಿರ ರೋಶನ್ ಅಪ್ಪಚ್ಚು, ಪೊನ್ನಂಪೇಟೆ ಕೊಡವ ಸಮಾಜದ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಬೆಂಗಳೂರು ಕೊಡವ ಸಮಾಜದ ಅಧ್ಯಕ್ಷ ಚಿರಿಯಪಂಡ ಸುರೇಶ್ ನಂಜಪ್ಪ, ಮತ್ತಿತರರು ಪಾಲ್ಗೊಂಡಿದ್ದರು.