ವೀರಾಜಪೇಟೆ, ಏ.3: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮುಖಾಂತರ ಬಾಳೆಲೆಯಲ್ಲಿರುವ ಶ್ರೀ ಕನ್ನಂಬಾಡಿ ಲಕ್ಷ್ಮೀ ದೇವಸ್ಥಾನದ ಜೀರ್ಣೋದ್ಧಾರಕ್ಕೆ ರೂ.50,000 ಮಾಡಲಾಗಿದೆ.
ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆ ಅವರ ನಿರ್ದೇಶನದಂತೆ ಹಣ ಮಂಜೂರಾಗಿದ್ದು, ಮಂಜೂರಾತಿ ಪತ್ರ ವನ್ನು ವೀರಾಜಪೇಟೆಯ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧ ಯೋಜನೆಯ ಯೋಜನಾಧಿಕಾರಿಗಳಾದ ಹರೀಶ್ ಅವರು ದೇವಾಲಯದ ಆಡಳಿತ ಮಂಡಳಿಯವರಿಗೆ ಹಸ್ತಾಂತರ ಮಾಡಿದರು.