ವೀರಾಜಪೇಟೆ, ಏ. 3: ನಗರದ ಶಿವಕೇರಿಯಲ್ಲಿರುವ ಶ್ರೀ ದುರ್ಗಿ ವಿಷ್ಣು ಮೂರ್ತಿ ನಾಗ ದೇವಸ್ಥಾನದಲ್ಲಿ ತಾ. 10 ರಂದು ಶ್ರೀ ದುರ್ಗಿ ವಿಷ್ಣುಮೂರ್ತಿ ನಾಗದೇವರ ಪ್ರತಿಷ್ಠಾ ವರ್ಧಂತಿ ಹಾಗೂ 5ನೇ ವಾರ್ಷಿಕೋತ್ಸವ ನಡೆಯಲಿದೆ ಎಂದು ದೇವಾಲಯದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
ವಾರ್ಷಿಕೋತ್ಸವದ ಅಂಗವಾಗಿ ಬೆಳಿಗ್ಗೆ ಗಣಪತಿ ಹೋಮ, ಪ್ರಧಾನ ಕಲಶ ಪೂಜೆ, ವಿಷ್ಣು ಸಹಸ್ರನಾಮ, ತುಳಸಿ ಅರ್ಚನೆ, ಕಲಶ ಅಭಿಷೇಕ, ಬೆಳ್ಳಿಯ ಕವಚ ಸಮರ್ಪಣೆ, ಬೆಳಿಗ್ಗೆ 10 ಗಂಟೆಯಿಂದ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಮಧ್ಯಾಹ್ನ 12.30ಕ್ಕೆ ದೇವರ ಅಲಂಕಾರ ಪೂಜೆ, ಶ್ರೀದುರ್ಗಿ ವಿಷ್ಣು ಮೂರ್ತಿ ನಾಗದೇವರಿಗೆ ಮಹಾಪೂಜೆ ಪ್ರಸಾದ ವಿನಿಯೋಗ ನಂತರ ಅನ್ನಸಂತರ್ಪಣೆ ನಡೆಯಲಿದೆ.