ಸಿದ್ದಾಪುರ, ಏ. 4: ಆನೆ-ಮಾನವ ಸಂಘರ್ಷ ತಡೆಗೆ ಮುಖ್ಯಮಂತ್ರಿಗಳು ವಿಶೇಷ ಅನುದಾನವನ್ನು ನೀಡಿದ್ದು, ಇದೀಗ ಕಾಮಗಾರಿ ಪ್ರಾರಂಭಿಸಲು ಯೋಜನೆ ತಯಾರಾಗಿದೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಪೆÇನ್ನಣ್ಣ ತಿಳಿಸಿದರು.
ಸಿದ್ದಾಪುರ ಸಮೀಪದ ಅವರೆಗುಂದ ಅರಣ್ಯ ಪ್ರದೇಶದಲ್ಲಿ ವೀರಾಜಪೇಟೆ ವಲಯ ಅರಣ್ಯ ಇಲಾಖೆಯ ಆನೆ ಕಾರ್ಯಪಡೆಗೆ ನೂತನ ಜೀಪನ್ನು ಹಸ್ತಾಂತರಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಆನೆ - ಮಾನವ ಸಂಘರ್ಷವನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಆಯವ್ಯಯ ಮಂಡಿಸುವ ಸಂದರ್ಭ ರಾಜ್ಯಕ್ಕೆ ಹಾಗೂ ಕೊಡಗು ಜಿಲ್ಲೆಗೆ ವಿಶೇಷ ಅನುದಾನವನ್ನು ನೀಡಿದ್ದು, ವೀರಾಜಪೇಟೆ ಕ್ಷೇತ್ರದ ಮಾಲ್ದಾರೆ ಗ್ರಾಮದಿಂದ ಸಿದ್ದಾಪುರದ ಅವರೆಗುಂದ ಭಾಗದವರೆಗೆ ಸುಮಾರು ರೂ. 12 ಕೋಟಿ ವೆಚ್ಚದಲ್ಲಿ 7 ಕಿಲೋ ಮೀಟರ್ ಬ್ಯಾರಿಕೇಡ್ ಕಾಮಗಾರಿಯನ್ನು ಪ್ರಾರಂಭಿಸಲಾಗುವುದೆಂದು ಮಾಹಿತಿ ನೀಡಿದರು. ಮತ್ತಷ್ಟು ಅನುದಾನವನ್ನು ತರುವ ಮೂಲಕ ಸಿದ್ದಾಪುರ ಭಾಗದಲ್ಲಿ ಕಾಡಾನೆಗಳ ಹಾವಳಿ ಇರುವ ಜಾಗಗಳಲ್ಲಿ ಬ್ಯಾರಿಕೇಡ್ ಅಳವಡಿಸಲಾಗುವುದೆಂದರು.
ಇದೇ ಸಂದರ್ಭ ಅರಣ್ಯ ಇಲಾಖೆ ವತಿಯಿಂದ ಅರಣ್ಯ ಪ್ರದೇಶದಲ್ಲಿ ವಾಸಿಸುವ ಎರಡು ಮಹಿಳಾ ಫಲಾನುಭವಿಗಳಿಗೆ ಹೊಲಿಗೆ ಯಂತ್ರವನ್ನು ಶಾಸಕ ಪೆÇನ್ನಣ್ಣ ವಿತರಿಸಿದರು. ಕಾರ್ಯಕ್ರಮದಲ್ಲಿ ವೀರಾಜಪೇಟೆ ವಲಯ ಎ.ಸಿ.ಎಫ್. ತಹಸೀನ್ ಬಾನು, ಕುಶಾಲನಗರ 4ಐದನೇ ಪುಟಕ್ಕೆ
(ಮೊದಲ ಪುಟದಿಂದ) ವಲಯ ಎ.ಸಿ.ಎಫ್. ಗೋಪಾಲ್ ಎ.ಎ., ವೀರಾಜಪೇಟೆ ವಲಯ ಅರಣ್ಯ ಅಧಿಕಾರಿ ಶಿವರಾಂ, ಕುಶಾಲನಗರ ವಲಯ ಅರಣ್ಯ ಅಧಿಕಾರಿ ರಕ್ಷಿತ್ ಎನ್. ನಗರ್ ಹಾಗೂ ಉಪವಲಯ ಅರಣ್ಯ ಅಧಿಕಾರಿಗಳು ಮತ್ತು ವೀರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ಸಿದ್ದಾಪುರ ವಲಯ ಕಾಂಗ್ರೆಸ್ ಅಧ್ಯಕ್ಷ ಎಸ್.ಬಿ. ಪ್ರತೀಶ್, ವೀರಾಜಪೇಟೆ ತಾಲೂಕು ಪ್ರಚಾರ ಸಮಿತಿಯ ಅಧ್ಯಕ್ಷ ಮತೀನ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಎಂ.ಎಸ್. ವೆಂಕಟೇಶ್, ಕಾಂಗ್ರೆಸ್ ಪಕ್ಷದ ಪ್ರಮುಖರಾದ ಅನಿಲ್, ಸೀನಪ್ಪ, ಚೇಕು, ಗ್ರಾಮ ಪಂಚಾಯಿತಿ ಸದಸ್ಯರುಗಳು ಹಾಗೂ ಇನ್ನಿತರರು ಹಾಜರಿದ್ದರು. ನೂತನ ಜೀಪನ್ನು ಶಾಸಕ ಪೆÇನ್ನಣ್ಣ ಸ್ವತಹ ಚಾಲನೆ ಮಾಡಿದರು.
- ವಾಸು