ನಾಪೆÇೀಕ್ಲು, ಏ. 4: ಕೊಡಗು ಜಿಲ್ಲೆ ಹೇಗೆ ಸೇನೆಯಲ್ಲಿನ ಸೇವೆಗೆ ಹೆಸರುವಾಸಿಯಾಗಿದೆಯೋ ಅದೇ ರೀತಿ ಕ್ರೀಡೆಗೂ ಹೆಸರುವಾಸಿಯಾಗಿದೆ. ಹಾಕಿ ಕ್ರೀಡೆಗೆ ಸರ್ಕಾರ ನೀಡುತ್ತಿರುವ ಅನುದಾನದ ಸದ್ಬಳಕೆ ಆಗಬೇಕು ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಎ.ಎಸ್ ಪೆÇನ್ನಣ್ಣ ಹೇಳಿದರು.

ಇಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಆವರಣದಲ್ಲಿ ಕುಂಡ್ಯೋಳಂಡ ಕುಟುಂಬಸ್ಥರು ಕುಂಡ್ಯೋಳಂಡ ಕಪ್ ಹಾಕಿ ಉತ್ಸವದ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ದಾಖಲೆಯ ಸವಿನೆನಪಿಗಾಗಿ ನೂತನವಾಗಿ ನಿರ್ಮಿಸಿದ ಕ್ರೀಡಾಂಗಣವನ್ನು ಶನಿವಾರ ಲೋಕಾರ್ಪಣೆ ಮಾಡಿದ ಬಳಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹಾಕಿ ಕ್ರೀಡೆಗೆ ಒಂದು ಕೋಟಿ ರೂಪಾಯಿ ಅನುದಾನ ನೀಡುವ ಮೂಲಕ ಸರ್ಕಾರ ಹಾಕಿ ಕ್ರೀಡೆಯನ್ನು ಉತ್ತೇಜಿಸುತ್ತಿದೆ. ಸರ್ಕಾರದಿಂದ ಹಣ ತರುವುದು ಸುಲಭದ ಕೆಲಸವಲ್ಲ. ಕ್ರೀಡೆಗೆ ಇಷ್ಟು ದೊಡ್ಡ ಪ್ರಮಾಣದ ಹಣವನ್ನು ಒದಗಿಸುತ್ತಿರುವುದು ಹಾಕಿ ಉತ್ಸವಕ್ಕೆ ಮಾತ್ರ. ಕೊಡಗಿನಲ್ಲಿ ಪ್ರತಿ ವರ್ಷ ಹಾಕಿ ಉತ್ಸವ ನಡೆಯುವ ಸಂದರ್ಭ ಸರ್ಕಾರದ ಚಿಹ್ನೆ ಹಾಕಿ ಕ್ರೀಡಾ ಇಲಾಖೆಯನ್ನು ಗುರುತಿಸುವ ಕೆಲಸ ಆಗಬೇಕು ಎಂದರು. ಕುಂಡ್ಯೋಳಂಡ ಹಾಕಿ ಉತ್ಸವದ ಅಧ್ಯಕ್ಷ ರಮೇಶ್ ಮುದ್ದಯ್ಯ ಮಾತನಾಡಿ, ವಿದ್ಯಾರ್ಥಿಗಳು ಶೈಕ್ಷಣಿಕ ಕ್ಷೇತ್ರದಲ್ಲಿ ಮಾತ್ರವಲ್ಲದೆ ಕ್ರೀಡಾ ಕ್ಷೇತ್ರದಲ್ಲೂ ಮುಂದೆ ಬರಬೇಕು ಎಂದು ಹೇಳಿದರು.

ಕುಂಡ್ಯೋಳಂಡ ಹಾಕಿ ಉತ್ಸವದ ಸಂಚಾಲಕ ದಿನೇಶ್ ಕ್ರೀಡಾಭಿಮಾನಿಗಳ, ಸಂಘ ಸಂಸ್ಥೆಗಳ ಸಹಕಾರದಿಂದ ಕ್ರೀಡಾ ಕೂಟ ಯಶಸ್ವಿಯಾಗಿ ಜರುಗಿದೆ . ಕ್ರೀಡಾಂಗಣವನ್ನು ಒದಗಿಸಿರುವುದು ಹೆಮ್ಮೆ ತಂದಿದೆ ಎಂದರು.

ನಿಕಟಪೂರ್ವ ಪ್ರಾಂಶುಪಾಲೆ ಡಾ. ಕಾವೇರಿ ಅವರು ಕಾಲೇಜಿನಲ್ಲಿ ಸೇವೆ ಸಲ್ಲಿಸಿದ ಅನುಭವ, ಕಾಲೇಜಿನ ಅಭಿವೃದ್ಧಿಯ ಬಗ್ಗೆ ಅನಿಸಿಕೆ ವ್ಯಕ್ತಪಡಿಸಿದರು, ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಉμÁ ಜೋಯಪ್ಪ ಮಾತನಾಡಿ ಕಾಲೇಜಿನ ಪರವಾಗಿ ಕುಂಡ್ಯೋಳಂಡ ಕುಟುಂಬಸ್ಥರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸಿದರು.

ಈ ಸಂದರ್ಭ ಕುಂಡ್ಯೋಳಂಡ ಕುಟುಂಬದ ಮಾಹಿತಿಯನ್ನು ಒಳಗೊಂಡ ಪುಸ್ತಕವನ್ನು ಶಾಸಕ ಎ.ಎಸ್. ಪೆÇನ್ನಣ್ಣ ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪರವಾಗಿ ಕುಂಡ್ಯೋಳಂಡ ಕುಟುಂಬದ ಹಿರಿಯ ಕೆ.ಎಸ್. ಸುಬ್ಬಯ್ಯ ಅವರನ್ನು ಹಾಗೂ ಶಾಸಕ ಎ.ಎಸ್. ಪೆÇನ್ನಣ್ಣ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಡವ ಹಾಕಿ ಅಕಾಡೆಮಿ ಅಧ್ಯಕ್ಷರಾದ ಪಾಂಡಂಡ ಕೆ ಬೋಪಣ್ಣ, ಕಾಲೇಜು ಪ್ರಾಂಶುಪಾಲೆ ಎಚ್ ಸಿ ಪಲ್ಲವಿ ಹಾಗೂ ಕುಂಡ್ಯೋಳಂಡ ಕುಟುಂಬಸ್ಥರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು, ಕಾಲೇಜು ಅಭಿವೃದ್ಧಿ ಸಮಿತಿ ನಿರ್ದೇಶಕರು, ಕಾಲೇಜು ಸಿಬ್ಬಂದಿ ಉಪಸ್ಥಿತರಿದ್ದರು.

ಕಾಲೇಜು ವಿದ್ಯಾರ್ಥಿಗಳಾದ ಧನಲಕ್ಷ್ಮಿ ತಂಡ ಪ್ರಾರ್ಥಿಸಿ, ಪ್ರಾಂಶುಪಾಲೆ ಎಚ್.ಸಿ. ಪಲ್ಲವಿ ಸ್ವಾಗತಿಸಿ ಸಹಾಯಕ ಪ್ರಾಧ್ಯಾಪಕಿ ಸಹನಾ ಕಾರ್ಯಕ್ರಮ ನಿರೂಪಿಸಿದರು. ಕಾಲೇಜು ಸಮಿತಿ ನಿರ್ದೇಶಕರಾದ ಬಿದ್ದಾಟಂಡ ಮೇರಿ ಚಿಟ್ಟಿಯಪ್ಪ ವಂದಿಸಿದರು. -ದುಗ್ಗಳ