ಮಡಿಕೇರಿ, ಏ. 5: ಮಡಿಕೇರಿ ನಗರ ಆಟೋ ಚಾಲಕರ ಹಾಗೂ ಮಾಲೀಕರ ಸಂಘದ ವತಿಯಿಂದ ನಗರದ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ಕ್ರಿಕೆಟ್ ಪಂದ್ಯಾಟಕ್ಕೆ ಇಂದು ಚಾಲನೆ ದೊರೆಯಿತು.

ಮಡಿಕೇರಿ ನಗರ ಸಂಚಾರಿ ಪೊಲೀಸ್ ಠಾಣಾಧಿಕಾರಿ ಸಿ.ವಿ. ಶ್ರೀಧರ್, ವಕೀಲ ಕಪಿಲ್ ಕುಮಾರ್ ದುಗ್ಗಳ ಪಂದ್ಯಾಟಕ್ಕೆ ಚಾಲನೆ ನೀಡಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಡಿಕೇರಿ ನಗರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಅಧ್ಯಕ್ಷ ಎ. ಸಮದ್ ವಹಿಸಿದ್ದರು.

ಅತಿಥಿಗಳಾಗಿ ಸಮಾಜ ಸೇವಕ ಪ್ರದೀಪ್ ಕರ್ಕೆರ, ವೈದ್ಯ ಡಾ. ಕುಶ್ವಂತ್ ಕೋಳಿಬೈಲು, ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಜಿಲ್ಲಾಧ್ಯಕ್ಷ ಡಿ.ಹೆಚ್. ಮೇದಪ್ಪ ಪಾಲ್ಗೊಂಡಿದ್ದರು.