ಚೆಯ್ಯಂಡಾಣೆ, ಏ. 5: ಕಕ್ಕಬ್ಬೆ ಸಮೀಪದ ಕುಂಜಿಲ ಪೈನರಿ ದರ್ಗಾ ಷರೀಫ್ನಲ್ಲಿ ಅಂತ್ಯ ವಿಶ್ರಾಂತಿ ಪಡೆಯುತ್ತಿರುವ ಔಲಿಯಾಗಳ ಹೆಸರಿನಲ್ಲಿ ವರ್ಷಂಪ್ರತಿ ನಡೆಸಿಕೊಂಡು ಬರುವ ಉರೂಸ್ ಕಾರ್ಯಕ್ರಮ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಸಮಾಪ್ತಿಗೊಂಡಿತು.
ಕುಂಜಿಲ ಪೈನರಿ ಮುಸ್ಲಿಂ ಜಮಾಅತ್ ಅಧ್ಯಕ್ಷ ಎಂ.ಎ. ಸೌಕತ್ ಅಲಿ ಅಧ್ಯಕ್ಷತೆಯಲ್ಲಿ ನಡೆದ ಸಮಾರೋಪ ಸಮಾರಂಭವನ್ನು ಮಸೀದಿಯ ಸದರ್ ಮುಅಲ್ಲಿಮ್ ಅಬ್ದುಲ್ ನಾಸಿರ್ ಲತೀಫಿ ಉದ್ಘಾಟಿಸಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಧಾರ್ಮಿಕ ಭಾಷಣಕಾರ ಕೇರಳದ ಹಾಫಿಜ್ ಅಹ್ಮದ್ ಕಬೀರ್ ಬಾಖವಿ ಮಾತನಾಡಿ, ಇಸ್ಲಾಂನ ಆಚಾರ, ವಿಚಾರ, ಆದರ್ಶಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.
ಈ ಸಂದರ್ಭ ಮಸೀದಿಯ ಮುದರ್ರಿಸ್ ನಿಝಾರ್ ಅಹ್ಸನಿ ಕಕ್ಕಡಿಪುರಂ, ವೀರಾಜಪೇಟೆ ಶಾಫಿ ಜುಮಾ ಮಸೀದಿ ಅಧ್ಯಕ್ಷ ರಶೀದ್ ಹಾಜಿ, ಸಿ.ಎಂ. ಹಮೀದ್ ಮೌಲವಿ ಸುಂಟಿಕೊಪ್ಪ, ಮಸೀದಿಯ ಜಮಾಅತ್ ಉಪಾಧ್ಯಕ್ಷ ಅಬ್ದುಲ್ ರಹ್ಮಾನ್, ಕಾರ್ಯದರ್ಶಿ ಸಹೀದ್ ಪಯ್ಯಡತ್, ಕೋಶಾಧಿಕಾರಿ ಕುಂಡಂಡ ಹಂಝ, ದರ್ಸ್ ಸಮಿತಿ ಅಧ್ಯಕ್ಷ ತರ್ಮಲ್ ಹಂಝ, ಪಂಚಾಯಿತಿ ಸದಸ್ಯರಾದ ಕುಂಡಂಡ ರಜಾಕ್, ಬಷೀರ್ ಪೆÇಯಕ್ಕರೆ, ದುಬೈ ಕೊಡಗು ಹಳೆ ವಿದ್ಯಾರ್ಥಿಗಳ ಸಂಘದ ಕಾರ್ಯದರ್ಶಿ ರಫೀಕ್ ಕುಂಡಂಡ ಸೇರಿದಂತೆ ಜಮಾಅತ್ ಪದಾಧಿಕಾರಿಗಳು, ಸಲಹಾ ಸಮಿತಿ ಪದಾಧಿಕಾರಿಗಳು, ದರ್ಸ್ ಸಮಿತಿ ಪದಾಧಿಕಾರಿಗಳು, ರಿಲೀಫ್ ಸಮಿತಿ ಪದಾಧಿಕಾರಿಗಳು, ಜಮಾಅತ್ ಸದಸ್ಯರು, ಸಾರ್ವಜನಿಕರು ಹಾಜರಿದ್ದರು.