ಸೋಮವಾರಪೇಟೆ, ಏ. 5: ಕರ್ನಾಟಕ ರಕ್ಷಣಾ ವೇದಿಕೆಯ ಹೆಚ್. ಶಿವರಾಮೇಗೌಡ ಬಣದ ಸೋಮವಾರಪೇಟೆ ತಾಲೂಕು ಅಧ್ಯಕ್ಷರಾಗಿ ಸೋಮೇಶ್ ಆಯ್ಕೆಯಾಗಿದ್ದಾರೆ.

ಇಲ್ಲಿನ ಅಲೋಕ ಸಭಾಂಗಣದಲ್ಲಿ ನಡೆದ ಕರವೇ ಜಿಲ್ಲಾ ಹಾಗೂ ಸೋಮವಾರಪೇಟೆ - ಕುಶಾಲನಗರ ತಾಲೂಕಿನ ಪದಾಧಿಕಾರಿಗಳ ಸಭೆಯಲ್ಲಿ ನೂತನ ಪದಾಧಿಕಾರಿಗಳಿಗೆ ಪದಗ್ರಹಣ ನೆರವೇರಿತು.

ಸಂಘಟನೆಯ ಜಿಲ್ಲಾಧ್ಯಕ್ಷ ದಿನೇಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸೋಮವಾರಪೇಟೆ ತಾಲೂಕು ಅಧ್ಯಕ್ಷರನ್ನಾಗಿ ಸೋಮೇಶ್ ಅವರನ್ನು ಆಯ್ಕೆ ಮಾಡಲಾಯಿತು.

ಇದರೊಂದಿಗೆ ಜಿಲ್ಲಾ ಉಪಾಧ್ಯಕ್ಷರಾಗಿ ನಿರ್ಮಲಾ ಸುರೇಶ್, ವಿನ್ಸೆಂಟ್ ಲೋಬೋ, ಕಾರ್ಯದರ್ಶಿಯಾಗಿ ಸರಳಾ ರಾಮಣ್ಣ, ಗೌರವಾಧ್ಯಕ್ಷರಾಗಿ ಹೆಚ್. ನಾಗರಾಜ, ಸಂಘಟನಾ ಕಾರ್ಯದರ್ಶಿಯಾಗಿ ಲಿತೇಶ್ ಮೊಂತೆರೊ, ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಪುಟ್ಟಸ್ವಾಮಿ, ಕಾರ್ಯದರ್ಶಿಯಾಗಿ ಅನುಸೂಯ ಗಣೇಶ್ ಅವರುಗಳನ್ನು ನೇಮಕ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ, ಸಂಚಾಲಕ ಎಂ.ಎಸ್. ಮಣಿಕಂಠ ಸೇರಿದಂತೆ ಪದಾಧಿಕಾರಿಗಳು ಇದ್ದರು.