ಶನಿವಾರಸಂತೆ, ಏ. 5: ಪಟ್ಟಣದ ಯಶಸ್ವಿ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ಬಿಜೆಪಿ ಕೊಡ್ಲಿಪೇಟೆ ಮಹಾ ಶಕ್ತಿ ಕೇಂದ್ರ (ಶನಿವಾರಸಂತೆ, ದುಂಡಳ್ಳಿ, ಬ್ಯಾಡಗೊಟ್ಟ, ಕೊಡ್ಲಿಪೇಟೆ) ಸಮಿತಿಯ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯು ಸೋಮವಾರಪೇಟೆ ತಾಲೂಕು ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಮೋಕ್ಷಿಕ್ ರಾಜ್ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಮಾಜಿ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಕಾರ್ಯಕರ್ತರು ಜಿಲ್ಲಾ ಪಂಚಾಯಿತಿ ಕ್ಷೇತ್ರವಾರು ಮಾಡಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾರ್ಗದರ್ಶನ ಮಾಹಿತಿ ನೀಡಿದರು.
ಈ ಸಂದರ್ಭ ಕೊಡ್ಲಿಪೇಟೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಎಂ.ಪಿ ದಯಾನಂದ್ ಹಾಗೂ ಕಾರ್ಯದರ್ಶಿಯಾಗಿ ಹರೀಶ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಮತ್ತೋರ್ವ ಮಂಡಲ ಪ್ರಧಾನ ಕಾರ್ಯದರ್ಶಿ ದರ್ಶನ್ ಜೋಯಪ್ಪ, ಜಿಲ್ಲಾ ಓಬಿಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ರಘು, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶರತ್ ಚಂದ್ರ, ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಎಸ್.ಸಿ ನಿತಿನ್, ಮಂಡಲ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪೂರ್ಣಿಮಾ ಕಿರಣ್, ಮಂಡಲ ಓಬಿಸಿ ಪೆÇೀರ್ಚಾದ ಕಾರ್ಯದರ್ಶಿ ಅಶ್ವಥ್, ಶನಿವಾರಸಂತೆ-ದುಂಡಳ್ಳಿ, ಬ್ಯಾಡಗೊಟ್ಟ, ಕೊಡ್ಲಿಪೇಟೆ ಶಕ್ತಿ ಕೇಂದ್ರದ ಅಧ್ಯಕ್ಷರುಗಳಾದ ಯತೀಶ್, ಪ್ರಣೀತ್, ಹೊನ್ನರಾಜ್, ಸಿ.ಎಸ್ ಹರೀಶ್, ಹಿರಿಯ ಮುಖಂಡರಾದ ಪ್ರಸಾದ್ ಪಟೇಲ್, ಭಗವಾನ್, ನಾಗರಾಜ್ ಮಳಲಿ, ಭುವನೇಶ್ವರಿಹರೀಶ್ ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.