ಮನೆಹಳ್ಳಿ, ಏ. 5: ಸನಾತನ ಧರ್ಮ ಉಳಿಯಬೇಕಾದರೆ ಮಠಮಾನ್ಯಗಳು ಉಳಿಯಬೇಕು ಎಂದು ವಿಧಾನ ಪರಿಷತ್ ಸದಸ್ಯೆ ಭಾರತಿ ಶೆಟ್ಟಿ ತಿಳಿಸಿದರು.

ತಾಲೂಕಿನ ಶನಿವಾರಸಂತೆ ಸಮೀಪದ ಆಲೂರುಸಿದ್ದಾಪುರ ಬಳಿಯ ಶ್ರೀ ತಪೆÇೀಕ್ಷೇತ್ರ ಮನೆಹಳ್ಳಿ ಮಠದಲ್ಲಿ 14ನೇ ವರ್ಷದ ಶ್ರೀ ಗುರುಸಿದ್ಧವೀರೇಶ್ವರ ಮಹಾರಥೋತ್ಸವದ ಧಾರ್ಮಿಕ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ಸದಾ ಅಸ್ತಿತ್ವದಲ್ಲಿರುವ ಜೀವನ ಮಾರ್ಗ ಇದು ಹಿಂದೂ ಧರ್ಮದ ಮೂಲಭೂತ ಮತ್ತು ಪ್ರಾಚೀನ ಹೆಸರಾಗಿದ್ದು, ಯಾವುದೇ ನಿರ್ದಿಷ್ಟ ಆರಂಭ ಅಥವಾ ಅಂತ್ಯವಿಲ್ಲದ, ನೈಸರ್ಗಿಕ ಕಾನೂನುಗಳು, ಕರ್ಮ, ಜ್ಞಾನ ಮತ್ತು ಭಕ್ತಿಯ ಮೇಲೆ ಆಧಾರಿತವಾದ ಸಾರ್ವತ್ರಿಕ ತತ್ವಗಳನ್ನು ಒಳಗೊಂಡಿದೆ. ಪ್ರಸ್ತುತ ಸಂದರ್ಭದಲ್ಲಿ ಮಠ ಮಾನ್ಯಗಳು ಧಾರ್ಮಿಕ ಚಿಂತನೆಯ ಜೊತೆಗೆ ಸಮಾಜಮುಖಿ ಚಿಂತನೆ ಹಾಗೂ ಶಿಕ್ಷಣ ಸಂಸ್ಥೆಗಳನ್ನ ಕಟ್ಟಿ ಬೆಳಸುತ್ತಿರುವುದು ಅತ್ಯಂತ ಸಂತಸದ ವಿಷಯ. ಆ ನಿಟ್ಟಿನಲ್ಲಿ ಮಠ ಮಾನ್ಯಗಳು ಅಧ್ಯಾತ್ಮಕ ಕೇಂದ್ರಗಳμÉ್ಟ ಅಲ್ಲ ಅವು ನೆಮ್ಮದಿಯ ತಾಣಗಳು ಕೂಡ ಆಗಿವೆ ಎಂದು ಭಾರತಿ ಶೆಟ್ಟಿ ಬಣ್ಣಿಸಿದರು.

ಹಿಂದೂ ಧರ್ಮವನ್ನು ಅಳಿಸಿ ಹಾಕಲು ಸಾಕಷ್ಟು ಜನರು ದೇಶದ ಮೇಲೆ ದಾಳಿ ಮಾಡಿದರೂ ಹಿಂದೂ ಧರ್ಮವನ್ನು ನಮ್ಮ ಪೂರ್ವಜರು ಕಾಪಾಡಿಕೊಂಡು ಬಂದಿದ್ದಾರೆ. ಹಿಂದೂ ಧರ್ಮದಲ್ಲಿ ಹುಟ್ಟಿರುವ ನಾವುಗಳು ನಮ್ಮ ಸನಾತನ ಧರ್ಮ ಸಂಸ್ಕøತಿ ಪರಂಪರೆಯನ್ನು ಉಳಿಸುವಂತಹ ಕಾರ್ಯ ಮಾಡಬೇಕಿದೆ ಎಂದು ಕರೆ ನೀಡಿದರು.

ಕೋಲಾರ ಜಿಲ್ಲಾ ನ್ಯಾಯಾಧೀಶರಾದ ಜಯಶ್ರ್ರೀ ಮಾತನಾಡಿ, ಬೆಳ್ಳಿ, ಬಂಗಾರ, ಹಣ, ಆಸ್ತಿ ಇದಾವುದೂ ನಿಜವಾದ ಸಂಪತ್ತಲ್ಲ. ನಮಗೆ ಎಲ್ಲವನ್ನೂ ದಯಪಾಲಿಸಿರುವ ಭಗವಂತನ ಸ್ಮರಣೆಯೇ ನಿಜವಾದ ಸಂಪತ್ತು ಎಂದರು.

ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಮಾಜಿ ಶಾಸಕ ಅಪ್ಪಚ್ಚು ರಂಜನ್ ಮಾತನಾಡಿ, ಮಠ-ಮಾನ್ಯಗಳು ಸಮಾಜದ ಸಾಂಸ್ಕøತಿಕ, ಧಾರ್ಮಿಕ ಮತ್ತು ಶೈಕ್ಷಣಿಕ ಕೇಂದ್ರಗಳಾಗಿ ಉಳಿಯಬೇಕು ಎಂಬುದು ಅನೇಕರ ಅಭಿಪ್ರಾಯವಾಗಿದೆ. ಇವು ಶಾಂತಿ ನೆಲೆಸುವ ತಾಣಗಳಾಗಿದ್ದು, ಶೈಕ್ಷಣಿಕ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಮೂಲ ಮಠ-ಮಾನ್ಯಗಳು, ಧರ್ಮಗುರುಗಳು ಯಥಾನುಸಾರ ಉಪದೇಶ ನೀಡಿ ನೈತಿಕ-ಮಾನವೀಯ ಮೌಲ್ಯಗಳನ್ನು ಕಟ್ಟಿಕೊಡುತ್ತಿದ್ದಾರೆ. ಧಾರ್ಮಿಕ ಜಾಗೃತಿಯು ಹೆಚ್ಚುತ್ತಿರುವಾಗ ಸಂಬಂಧಗಳು ಹದಗೆಡುವ ಪ್ರಶ್ನೆಯೇ ಉದ್ಬವಿಸುವುದಿಲ್ಲ ಎಂದರು.

ಮನೆಹಳ್ಳಿ ಮಠಾಧ್ಯಕ್ಷರಾದ ಶ್ರೀ ಮಹಾಂತಶಿವಲಿಂಗ ಸ್ವಾಮೀಜಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಈ ಸಂದರ್ಭ ಶ್ರೀ ಕ್ಷೇತ್ರಕ್ಕೆ ಸಹಕಾರ ನೀಡಿದವರನ್ನು ಸನ್ಮಾನಿಸಿ ಗೌರವಿಸಲಾಯಿತು. ವೇದಿಕೆಯಲ್ಲಿ ಅರಮೇರಿ ಕಳಂಚೇರಿ ಮಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಕಲ್ಲುಮಠಾಧ್ಯಕ್ಷರಾದ ಶ್ರೀ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠಾಧ್ಯಕ್ಷರಾದ ಶ್ರೀ ಸದಾಶಿವ ಸ್ವಾಮೀಜಿ, ಕೆÀಸ್ತೂರು ಮಠಾಧ್ಯಕ್ಷರಾದ ಶ್ರೀ ಬಸವರಾಜೇಂದ್ರ ಸ್ವಾಮೀಜಿ, ಕೊಡಗು ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಕಾರ್ಯಪ್ಪ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಹಿರಿಯ ಸಾಹಿತಿ ಮೋಹನ್‍ಪಾಳೇಗಾರ್, ಬೆಮ್ಮತ್ತಿ ಸುರೇಶ್, ಶಕ್ತಿ ದಿನಪತ್ರಿಕೆ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ಚಲನಚಿತ್ರ ನಟ ಧರ್ಮ, ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷ ಲೋಕೇಶ್ ಸಾಗರ್, ಕೊಡಗು ವಿಶ್ವವಿದ್ಯಾಲಯದ ಕನ್ನಡ ಉಪನ್ಯಾಸಕ ಜಮೀರ್ ಅಹಮದ್ ಇದ್ದರು. ಕಾರ್ಯಕ್ರಮದ ನಿರ್ವಹಣೆಯನ್ನು ಎಸ್ ಮಹೇಶ್ ವಹಿಸಿದ್ದರು. ಶಿಕ್ಷಕ ಬಸವರಾಜ್ ಕಾರ್ಯಕ್ರಮ ನಿರೂಪಿಸಿದರು.

ಸಾಂಸೃತಿಕ ವೇದಿಕೆಯಲ್ಲಿ ಭಕ್ತಿಗೀತೆಗಳು, ಶಾಸ್ರೀಯ ಸಂಗೀತ, ಭರತನಾಟ್ಯ, ಕೊಳಲುವಾದನ ಕಾರ್ಯಕ್ರಮ ನಡೆಯಿತು.