ಸಿದ್ದಾಪುರ, ಏ. 6: ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೆಲ್ಲಿಹುದಿಕೇರಿಯ ಶಾಖೆಗೆ ಪದಾಧಿಕಾರಿಗಳ ಆಯ್ಕೆ ವಿ.ಎಸ್.ಎಸ್.ಎನ್. ಸಭಾಂಗಣದಲ್ಲಿ ಜಿಲ್ಲಾ ಕಾರ್ಯದರ್ಶಿ ಸುರೇಶ್ ಕುಮಾರ್ ನೆಲ್ಲಿಕಲ್ಲ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಮಾತನಾಡಿದ ಅವರು ರಾಜ್ಯಾದ್ಯಂತ ಕನ್ನಡ ಶಾಲೆಗಳ ಹಾಗೂ ಮುರಾರ್ಜಿ ದೇಸಾಯಿ ವಸತಿ ಶಾಲೆಗಳ ಉಳಿವಿಗೆ ನಮ್ಮ ಸಂಘಟನೆ ಪಣತೊಟ್ಟಿದ್ದು, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯಗಳಿಗೆ ಶೈಕ್ಷಣಿಕ ಸೌಲಭ್ಯ ನೀಡಿ ಮೇಲೆತ್ತುವ ಕೆಲಸ ವಾಗಬೇಕಿದೆ. ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರ ಸೇರಿದಂತೆ ಜಿಲ್ಲೆಯ ಬಹುತೇಕ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರ ಕೊರತೆ ಹಾಗೂ ಔಷಧಿ ಕೊರತೆ ಇದ್ದು ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಮುಂದಿನ ದಿನಗಳಲ್ಲಿ ಕರವೆ ಸ್ವಾಭಿಮಾನಿ ಬಣದ ನೇತೃತ್ವದಲ್ಲಿ ಹೋರಾಟ ರೂಪಿಸಲಾಗುವುದು. ಸರಕಾರದ ಸೌಲಭ್ಯ ಸಮರ್ಪಕವಾಗಿ ತಲುಪಿಸುವ ಕೆಲಸ ವಾಗಬೇಕಿದ್ದು ಭ್ರμÁ್ಟಚಾರ ಮುಕ್ತ ಸಮಾಜ ನಿರ್ಮಾಣಕ್ಕೆ ಎಲ್ಲಾ ಗ್ರಾಮಗಳಲ್ಲಿ ಸಂಘಟನೆಯನ್ನು ಬಲಪಡಿಸಲಿದ್ದು, ಕೈ ಜೋಡಿಸಬೇಕು ಎಂದು ಮನವಿ ಮಾಡಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಸಲಹೆಗಾರ ಸಜಿಲ್ ಕುಮಾರ್, ಇಲ್ಲಿನ ನೆಲ, ಜಲ, ನಾಡು-ನುಡಿ,ಸಂಸ್ಕøತಿ ಪರಿಸರ ರಕ್ಷಣೆಗೆ ಎಲ್ಲರೂ ಬದ್ಧರಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು.
ನೆಲ್ಲಿಹುದಿಕೇರಿ ಶಾಖೆಯ ನೂತನ ಅಧ್ಯಕ್ಷರಾಗಿ ಹರೀಶ್ ಪಿ.ಆರ್., ಉಪಾಧ್ಯಕ್ಷರಾಗಿ ರಶಾದ್ ಎ.ಎಂ., ಕಾರ್ಯದರ್ಶಿ ನಂದ ಆರ್ ಅವರುಗಳನ್ನು ಆಯ್ಕೆ ಮಾಡಲಾಗಿದ್ದು ತಾ. 8ರಂದು ಕುಶಾಲನಗರದಲ್ಲಿ ರಾಜ್ಯಾಧ್ಯಕ್ಷ ಪಿ. ಕೃμÉ್ಣ ಗೌಡ ಅವರ ನೇತೃತ್ವದಲ್ಲಿ ಜಿಲ್ಲಾ ಸಮಿತಿಯ ಪದಗ್ರಹಣ ನಡೆಯಲಿದೆ ಎಂದರು. ಈ ಸಂದರ್ಭ ಸಂಘಟನೆಯ ಜಿಲ್ಲಾ ಗೌರವ ಅಧ್ಯಕ್ಷ ಚಂದ್ರು, ಉಪಾಧ್ಯಕ್ಷ ರಾಜಶೇಖರ ಗೌಡ್ರು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯಶ್ರೀ ಮುರುಗೇಶ್, ಗೌರವಾಧ್ಯಕ್ಷೆ ವಾಣಿ ಮಾಚಿಮಾಡ ಪದಾಧಿಕಾರಿಗಳಾದ ಚಂದ್ರಶೇಖರ್, ಜಯರಾಜ್, ಸತೀಶ್ ಕುಮಾರ್, ರವಿ, ಚೇತನ್, ಸುರೇಶ್ ಹಾಜರಿದ್ದರು.