ಮಡಿಕೇರಿ,ಏ. 6: ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ಸಂಘಟನೆಯ ವತಿಯಿಂದ ಇದೇ ಪ್ರಥಮ ಬಾರಿಗೆ ಸೋಮವಾರಪೇಟೆಯಲ್ಲಿ ರಾಜ್ಯಮಟ್ಟದ ಪ್ರತಿಷ್ಠಿತ ಆಹ್ವಾನಿತ ತಂಡಗಳ ನಡುವೆ ಯಿಫಾ ಹಾಕಿ ಚಾಂಪಿಯನ್ಸ್ ಟ್ರೋಫಿ ಹಾಕಿ ಪಂದ್ಯಾಟ ಆಯೋಜಿಸಲಾಗಿದೆ ಎಂದು ಸಂಘಟನೆಯ ಅಧ್ಯಕ್ಷ ಶ್ರೀನಿಧಿ ಲಿಂಗಪ್ಪ ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸೋಮವಾರಪೇಟೆಯ ಸಿಂಥೆಟಿಕ್ ಆಸ್ಟ್ರೋ ಟರ್ಫ್ ಮೈದಾನದಲ್ಲಿ ಮೇ 7 ರಿಂದ 10ರವರೆಗೆ ನಡೆಯಲಿದೆ. ಪಂದ್ಯಾವಳಿ ಆಯೋಜನೆಯ ಬಗ್ಗೆ ಹಾಕಿ ಕೂರ್ಗ್ ಮತ್ತು ಹಾಕಿ ಕರ್ನಾಟಕ, ಹಾಕಿ ಇಂಡಿಯಾ ಸಂಸ್ಥೆಗಳೊಂದಿಗೆ ಪೂರ್ವ ಭಾವಿ ಸಭೆ ನಡೆಸಿ ಚರ್ಚಿಸಲಾಗಿದೆ. ಅಂತೆಯೇ ಸೋಮವಾರಪೇಟೆಯ ಬ್ಲೂ ಸ್ಟಾರ್ ಹಾಕಿ ಕ್ಲಬ್, ಡಾಲ್ಫೀನ್ಸ್ ಸ್ಫೋಟ್ರ್ಸ್ ಕ್ಲಬ್ ಸಂಸ್ಥೆಗಳೊಂದಿಗೆ ಸಭೆ ನಡೆಸಿದ್ದು, ಬೆಂಬಲ ನೀಡಿದ್ದಾರೆ ಎಂದರು.
ಯುವ ಜನ ಸೇವಾ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಸೋಮವಾರಪೇಟೆಯ ಟರ್ಫ್ ಮೈದಾನದಲ್ಲಿ ಮೇ.7 ರಿಂದ 10ರವರೆಗೆ ನಡೆಯುವ ಹಾಕಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟದ ಪ್ರತಿಷ್ಠಿತ ತಂಡಗಳಾದ ಕೆನರಾ ಬ್ಯಾಂಕ್, ಕರ್ನಾಟಕ ಸ್ಟೇಟ್ ಪೆÇಲೀಸ್, ಎಜಿಓಆರ್.ಸಿ., ಸೌತ್ ವೆಸ್ಟರ್ನ್ ರೈಲ್ವೇಸ್, ಕಸ್ಟಮ್ಸ್, ಡಿವೈಇಎಸ್, ಸೌತರ್ನ್ ಕಮಾಂಡ್ ಹಾಗೂ ಆತಿಥೇಯ ಯಿಫಾ ತಂಡಗಳು ಭಾಗವಹಿಸುತ್ತಿವೆ. ಪಂದ್ಯಾಟದಲ್ಲಿ ಚಾಂಪಿಯನ್ ಆಗಿ ಹೊರಹೊಮ್ಮುವ ತಂಡಕ್ಕೆ ರೂ. 2 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ, ದ್ವಿತೀಯ ಸ್ಥಾನ ಪಡೆಯುವ ತಂಡಕ್ಕೆ ರೂ.1 ಲಕ್ಷ ನಗದು ಹಾಗೂ ಟ್ರೋಫಿ ನೀಡಲಾಗುವುದು. ಇದರೊಂದಿಗೆ ವೈಯಕ್ತಿಕ ವಿಭಾಗದಲ್ಲಿಯೂ ಪ್ರಶಸ್ತಿಗಳನ್ನು ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.
ಸೋಮವಾರಪೇಟೆ ಮೈದಾನದಲ್ಲಿ ಆಟವಾಡಿದ ಹಲವಷ್ಟು ಮಂದಿ ಆಟಗಾರರು ರಾಜ್ಯ, ರಾಷ್ಟ್ರ, ಅಂತರರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿದ್ದಾರೆ. ಇಂದಿನ ಯುವ ಪೀಳಿಗೆ ಹಾಗೂ ಮಕ್ಕಳಲ್ಲಿ ಹಾಕಿ ಕ್ರೀಡೆಯ ಬಗ್ಗೆ ಆಸಕ್ತಿ ಮೂಡಿಸುವ ಉದ್ದೇಶದಿಂದ ಯಿಫಾ ಸಂಘಟನೆ ಇದೇ ಪ್ರಥಮವಾಗಿ ರಾಜ್ಯಮಟ್ಟದ ಹಾಕಿ ಪಂದ್ಯಾವಳಿ ಆಯೋಜಿಸಿದೆ. ಪಂದ್ಯಾಟದಲ್ಲಿ ಭಾರತ ಹಾಕಿ ತಂಡವನ್ನು ಪ್ರತಿನಿಧಿಸಿರುವ ಹಲವಷ್ಟು ಆಟಗಾರರು ಭಾಗವಹಿಸುತ್ತಿದ್ದಾರೆ ಎಂದರು. ತಾ.11 ರಂದು ಲೋಗೋ ಬಿಡುಗಡೆ: ಪಂದ್ಯಾವಳಿಯ ಲೋಗೋ ಹಾಗೂ ಟ್ರೋಫಿಯನ್ನು ತಾ. 11 ರಂದು ಪೂರ್ವಾಹ್ನ ಮಡಿಕೇರಿಯ ವ್ಯಾಲಿ ವ್ಯೂ ಸಬಾಂಗಣದಲ್ಲಿ ಅನಾವರಣ ಮಾಡಲಾಗುವುದು. ಜಿಲ್ಲಾಧಿಕಾರಿ ಸೋಮಶೇಖರ್, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಬಿಂದುಮಣಿ, ಯುವ ಜನಸೇವಾ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕಿ ವಿ.ಟಿ. ವಿಸ್ಮಯಿ ಚಕ್ರವರ್ತಿ, ಡಿಎಫ್‍ಓ ಅಭಿμÉೀಕ್ ಸೇರಿದಂತೆ ಇತರರು ಅನಾವರಣ ಮಾಡಲಿದ್ದಾರೆ ಎಂದು ಶ್ರೀನಿಧಿ ಲಿಂಗಪ್ಪ ತಿಳಿಸಿದರು. ಗೋಷ್ಠಿಯಲ್ಲಿ ಅಸೋಸಿಯೇಷನ್ ಉಪಾಧ್ಯಕ್ಷ ಹರ್ಷಿತ್ ಶಿವಪ್ಪ, ಕಾರ್ಯದರ್ಶಿ ಸಜನ್ ಮಂದಣ್ಣ, ಪಂದ್ಯಾವಳಿಯ ಸಂಯೋಜಕ ಅಭಿμÉೀಕ್ ಗೋವಿಂದಪ್ಪ, ಸಲಹೆಗಾರ ವಿಜಯ್ ಹಾನಗಲ್, ಪ್ರೇಕ್ಷಿತ್ ಇದ್ದರು.