ಮಡಿಕೇರಿ, ಏ. 6: ಕುಶಾಲನಗರ ತಾಲೂಕು ತ್ರೈಮಾಸಿಕ ಕೆಡಿಪಿ ಸಭೆಯು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್‍ಗೌಡ ಅವರ ಅಧ್ಯಕ್ಷತೆಯಲ್ಲಿ ತಾ. 7 ರಂದು (ಇಂದು) ಬೆಳಿಗ್ಗೆ 10.30 ಗಂಟೆಗೆ ಕುಶಾಲನಗರ ಪುರಸಭೆ ಸಭಾಂಗಣದಲ್ಲಿ ನಡೆಯಲಿದೆ ಎಂದು ಕುಶಾಲನಗರ ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.