ಮಡಿಕೇರಿ, ಏ. 6: ತೋಟಗಾರಿಕೆ ಇಲಾಖೆ ಅಧೀನದ ತೋಟಗಾರಿಕೆ ತರಬೇತಿ ಕೇಂದ್ರಗಳಲ್ಲಿ ರೈತ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಯು 2026 ರ ಮೇ, 02 ರಿಂದ 2027 ರ ಫೆಬ್ರವರಿ, 28 ರವರೆಗೆ ಹಾಸನ ಜಿಲ್ಲೆಯ ಸೋಮನಹಳ್ಳಿ ಕಾವಲ್ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ ನಡೆಯಲಿದ್ದು, ಈ ಸಂಬಂಧ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ತಾ. 15 ಕೊನೆಯ ದಿನವಾಗಿದೆ. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ರಾಜ್ಯ ವಲಯ, ಮಡಿಕೇರಿ ಕಚೇರಿಯಿಂದ ಪಡೆಯಬಹುದು. ಹೆಚ್ಚಿನ ವಿವರಗಳಿಗೆ ಕಚೇರಿಯನ್ನು ಬೆಳಿಗ್ಗೆ 10 ರಿಂದ ಸಂಜೆ 5.30 ರೊಳಗೆ ಸಂಪರ್ಕಿಸಬಹುದು ಅಥವಾ ಅಂತರ್ಜಾಲ hಣಣಠಿs://hoಡಿಣiಛಿuಟಣuಡಿeಜiಡಿ.ಞಚಿಡಿಟಿಚಿಣಚಿಞಚಿ.gov.iಟಿ ಇಲ್ಲಿ ಅರ್ಜಿಯನ್ನು ಪಡೆಯಬಹುದು. ಮೂಲ ಅಗತ್ಯ ದಾಖಲಾತಿಗಳೊಡನೆ ಅರ್ಹ ಅಭ್ಯರ್ಥಿಗಳು ನಿಗದಿತ ಸಮಯದೊಳಗೆ ಅರ್ಜಿಯನ್ನು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ), ಮಡಿಕೇರಿಗೆ ಖುದ್ದು ಸಲ್ಲಿಸಬೇಕು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ತಿಳಿಸಿದ್ದಾರೆ.