ಮಡಿಕೇರಿ, ಏ. 6: ಕರ್ನಾಟಕ ಲೋಕಾಯುಕ್ತ ಮಡಿಕೇರಿಯ ಲೋಕಾಯುಕ್ತ ಅಧಿಕಾರಿಗಳು ತಾ. 8 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಡಿಕೇರಿ ತಾಲೂಕು ಕಚೇರಿ ಸಭಾಂಗಣದಲ್ಲಿ ಕರ್ನಾಟಕ ಲೋಕಾಯುಕ್ತ ಕಾಯಿದೆಯಡಿ ದೂರು ಅರ್ಜಿ ಸ್ವೀಕರಿಸಲಿದ್ದಾರೆ. ಭರ್ತಿ ಮಾಡಿದ ಮತ್ತು ನೋಟರಿಯಿಂದ ಆಫಿಡವಿಟ್ ಮಾಡಿಸಿದ ಅರ್ಜಿ ಸ್ವೀಕರಿಸಲಾಗುವುದು.
ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ ಇನ್ನಿತರ ತೊಂದರೆ ನೀಡುತ್ತಿರುವ ಸರ್ಕಾರಿ ಅಧಿಕಾರಿ/ ನೌಕರರ ವಿರುದ್ದ ಸಾರ್ವಜನಿಕರು ದೂರುಗಳನ್ನು ನಿಗದಿತ ಪತ್ರದಲ್ಲಿ ನೀಡಬಹುದಾಗಿದೆ. ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಕೋರಿದೆ. ಹೆಚ್ಚಿನ ವಿವರಗಳಿಗೆ ಮಡಿಕೇರಿ ಲೋಕಾಯುಕ್ತ ಪೊಲೀಸ್ ಕಚೇರಿ, ಗೌಳಿಬೀದಿ, ದೂರವಾಣಿ ಸಂಖ್ಯೆ. 08272-295297 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರು ತಿಳಿಸಿದ್ದಾರೆ.