ಮಡಿಕೇರಿ, ಮೇ. 7: ಇದೇ ಮೊದಲ ಬಾರಿಗೆ ಭಾರತದಲ್ಲಿ ಕಾಗದ ರಹಿತ ಡಿಜಿಟಲ್ ಗಣತಿ ಕಾರ್ಯವನ್ನು ಹಮ್ಮಿಕೊಂಡಿದ್ದು, ಕೊಡಗು ಜಿಲ್ಲೆಯಲ್ಲಿಯೂ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಈಗಾಗಲೇ ಅಂತರ್ಜಾಲದ ಮೂಲಕ ಗಣತಿ ಪ್ರಕ್ರಿಯೆ ಆರಂಭವಾಗಿದ್ದು, ಸರಳ ವಿಧಾನಗಳ ಮೂಲಕ ಮನೆಯಿಂದಲೇ ಗಣತಿ ಕಾರ್ಯವನ್ನು ನಡೆಸಬಹುದಾಗಿದೆ.

ಕೊಡಗು ಜಿಲ್ಲೆಯಲ್ಲಿ ಭಾರತದ ಮೊದಲ ಡಿಜಿಟಲ್ ಜನಗಣತಿ ಕಾರ್ಯವನ್ನು ಎರಡು ಹಂತಗಳಲ್ಲಿ ನಡೆಸಿ ಗಣತಿ ಮಾಹಿತಿಯನ್ನು ಸಂಗ್ರಹಿಸುವ ಪ್ರಕ್ರಿಯೆ ಚಾಲ್ತಿಯಲ್ಲಿ ಇದೆ. ಈ ಪೈಕಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಸ್ವಯಂ ಗಣತಿ ಕಾರ್ಯವನ್ನು ಮಾಡಲು ಅವಕಾಶಗಳನ್ನು ನೀಡಲಾಗಿದೆ. ಪ್ರಕ್ರಿಯೆ ಡಿಜಿಟಲ್ ಆಗಿ ನಡೆಯುವ ಹಿನ್ನೆಲೆ ಸಾರ್ವಜನಿಕರ ಮಾಹಿತಿಗಳನ್ನು ಗೌಪ್ಯವಾಗಿಡಲು ಕ್ರಮಕೈಗೊಳ್ಳಲಾಗಿದೆ.

ತಾ. 1 ರಿಂದ 15ರವರೆಗೆ ನಿರ್ದೇಶನಾಲಯದಿಂದ ನೀಡಿರುವ ಸರಳವಾದ ಹಂತಗಳನ್ನು ಅನುಸರಿಸುವುದರ ಮೂಲಕ 15-20 ನಿಮಿಷಗಳಲ್ಲಿ ಸ್ವಯಂ ಗಣತಿಯನ್ನು ಮಾಡಿಕೊಂಡು ಏಕೀಕೃತ ಸ್ವಯಂ ಗಣತಿ ಗುರುತಿನ ಸಂಖ್ಯೆಯನ್ನು (Sಇಐಈ ಇಓUಒಇಖಂಖಿIಔಓ Iಆ) ಪಡೆಯಬಹುದಾಗಿದೆ. ಹಾಗೆಯೇ ಪರಿಶೀಲನೆಗೆ ಬರುವ ಗಣತಿದಾರರಿಗೆ ಈ ಐಡಿಯನ್ನು ಒದಗಿಸಿ ಮನೆಗಣತಿ ಕಾರ್ಯವನ್ನು ಪೂರ್ಣಗೊಳಿಸಿಕೊಳ್ಳಬಹುದಾಗಿದೆ. ತಮ್ಮ ಸ್ವಯಂ ಮನೆ ಗಣತಿಯ ಕಾರ್ಯದ ನಿಖರತೆ ಮತ್ತು ಸಂಪೂರ್ಣತೆಯನ್ನು ಖಚಿತಪಡಿಸಿಕೊಳ್ಳಲು ಗಣತಿದಾರರು ಮತ್ತು ಮೇಲ್ವಿಚಾರಕರ ಪರಿಶೀಲನೆ ಮಾಡುತ್ತಾರೆ.

ವೆಬ್‍ಸೈಟ್ ಮೂಲಕ ಗಣತಿ

hಣಣಠಿs://se.ಛಿeಟಿsus.gov.iಟಿ/ ಅಂತರ್ಜಾಲದ ಲಿಂಕ್ ಮೂಲಕ ತಮ್ಮ ಮನೆಯ ಗಣತಿಯನ್ನು ಮಾಡಿಕೊಳ್ಳಬಹುದಾಗಿದೆ. ಸಮಸ್ಯೆಗಳು ಎದುರಾದ್ದಲ್ಲಿ ಅಂತರ್ಜಾಲದಲ್ಲಿ ಲಭ್ಯವಿರುವ se Useಡಿ ಉuiಜe, se ಈಟoತಿ ಅhಚಿಡಿಣ & se ಅಂಶಗಳಲ್ಲಿ ಪರಿಹಾರ ಲಭ್ಯವಿದೆ. ಅಧಿಕೃತ ಪೋರ್ಟಲ್ se.ಛಿeಟಿsus.gov.iಟಿ ಗೆ ಭೇಟಿ ನೀಡಿ, ನಿಮ್ಮ ಮೊಬೈಲ್ ಸಂಖ್ಯೆಗೆ ಬರುವ ಔಖಿP ಮೂಲಕ ಲಾಗಿನ್ ಆಗಿ, ನಿಮ್ಮ ರಾಜ್ಯ, ಜಿಲ್ಲೆ ಮತ್ತು ಸ್ಥಳೀಯ ವಿವರಗಳನ್ನು ಆಯ್ಕೆ ಮಾಡಿ, ಡಿಜಿಟಲ್ ಮ್ಯಾಪ್‍ನಲ್ಲಿ ನಿಮ್ಮ ಮನೆಯ ಸ್ಥಳವನ್ನು ಗುರುತಿಸಿ, ನಿಮ್ಮ ಮನೆ ಮತ್ತು ಕುಟುಂಬಕ್ಕೆ ಸಂಬಂಧಿಸಿದ ವಿವರಗಳನ್ನು ಭರ್ತಿ ಮಾಡಿ, ಸಲ್ಲಿಸಿದ ನಂತರ ನೀವು Sಇ Iಆ ಅನ್ನು ಸ್ವೀಕರಿಸುತ್ತೀರಿ, ನಿಮ್ಮ ಐಡಿಯನ್ನು ಸುರಕ್ಷಿತವಾಗಿರಿಸಿಕೊಳ್ಳಿ, ಗಣತಿದಾರರು ಭೇಟಿ ನೀಡಿದಾಗ ನಿಮ್ಮ ಐಡಿಯನ್ನು ಒದಗಿಸಿ, ಗಣತಿದಾರರು ಈ ಮೂಲಕ ವಿವರಗಳನ್ನು ದೃಢೀಕರಿಸುತ್ತಾರೆ.