ಮಡಿಕೇರಿ, ಏ. 7: ನಗರದ ಅಂಬೇಡ್ಕರ್ ಭವನ ಸಮಿತಿ ವತಿಯಿಂದ ಅಂಬೇಡ್ಕರ್ ಜಯಂತಿ ಪ್ರಯುಕ್ತ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಎಸ್‍ಎಸ್‍ಎಲ್‍ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಸಮುದಾಯದ ತಲಾ ಇಬ್ಬರು ವಿದ್ಯಾರ್ಥಿಗಳಿಗೆ ರೂ. 5 ಸಾವಿರ ನಗದು ಜೊತೆಗೆ ಪ್ರಶಸ್ತಿ ಪತ್ರದೊಂದಿಗೆ ಗೌರವಿಸಲಾಗುವುದು. ಅರ್ಹ ವಿದ್ಯಾರ್ಥಿಗಳು ಅಂಕಪಟ್ಟಿ, ಭಾವಚಿತ್ರ, ಜಾತಿದೃಢೀಕರಣ ಪತ್ರದೊಂದಿಗೆ ಸ್ವವಿವರವನ್ನು ತಾ. 12 ರೊಳಗಾಗಿ 9480870210 ಸಂಖ್ಯೆಗೆ ವಾಟ್ಸ್ಯಾಪ್ ಮೂಲಕ ಕಳುಹಿಸಿಕೊಡಬೇಕು. ಹೆಚ್ಚಿನ ಮಾಹಿತಿಗೆ 9449634753 ಸಂಖ್ಯೆಯನ್ನು ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ತಾ. 14 ರಂದು ಅಂಬೇಡ್ಕರ್ ಭವನ ಸಮಿತಿ ಹಾಗೂ ಅಶೋಕಪುರ ಅನ್ನಪೂಣೇಶ್ವರಿ ಸಮುದಾಯ ಭವನ ಸಮಿತಿ ವತಿಯಿಂದ ನಡೆಯುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಲಾಗುವುದು.