ನಾಪೆÇೀಕ್ಲು, ಏ. 7: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಿಸಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಚೆಂಬು ಗ್ರಾಮದ ವಾತ್ಸಲ್ಯ ಫಲಾನುಭವಿಗಳಾದ ದೇವಕಿ ಹಾಗೂ ಲೀಲಾರವರಿಗೆ ಹೇಮಾವತಿ ವಿ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಡಗು ಜಿಲ್ಲೆಯ ಜಿಲ್ಲಾ ನಿರ್ದೇಶಕರಾದ ಲೀಲಾವತಿರವರು ಹಣ್ಣು ಹಂಪಲು ವಿತರಣೆ ಮಾಡಿ ಯೋಗ ಕ್ಷೇಮ ವಿಚಾರಿಸಿದರು,

ಮಡಿಕೇರಿ ತಾಲೂಕಿನ ಒಟ್ಟು 35 ವಾತ್ಸಲ್ಯ ಕುಟುಂಬಗಳಿಗೆ ಹಣ್ಣು ಹಂಪಲು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ತಾಲೂಕಿನ ಯೋಜನಾಧಿಕಾರಿ ಪುರುμÉೂೀತ್ತಮ, ಜ್ಞಾನವಿಕಾಸ ಸಮನ್ವಯಾಧಿಕಾರಿ ಹಾಗೂ ಸೇವಾಪ್ರತಿನಿಧಿಗಳು ಉಪಸ್ಥತರಿದ್ದರು.