ಕೂಡಿಗೆ, ಏ. 8: ರಾಜ್ಯದಲ್ಲೇ ಪ್ರಥಮವಾಗಿ ಆರಂಭಗೊಂಡು ಈಗಾಗಲೇ 42 ವರ್ಷಗಳನ್ನು ಕಂಡಿರುವ ಕೂಡಿಗೆಯ ಸರಕಾರಿ ಕ್ರೀಡಾ ಪ್ರೌಢಶಾಲಾ ಅಭಿವೃದ್ಧಿಗೆ ಕಳೆದ ಸಾಲಿನ ಬಜೆಟ್‍ನಲ್ಲಿ ಕಾಯ್ದಿರಿಸಲಾಗಿದ್ದ ರೂ. 3 ಕೋಟಿ ವೆಚ್ಚದ ಅನುದಾನದಲ್ಲಿ ಯುವÀ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮುಖೇನ ಈಗಾಗಲೇ ರಾಜ್ಯಮಟ್ಟದಲ್ಲಿ ಟೆಂಡರ್ ಪ್ರಕ್ರಿಯೆ ನಡೆದು ಅಭಿವೃದ್ಧಿ ಪೂರಕವಾದ ಕಾಮಗಾರಿಗಳು ಕ್ರೀಡಾಶಾಲೆಯ ಆವರಣದಲ್ಲಿ ನಡೆಯುತ್ತಿವೆ. ಅದರ ಮೂಲಕ ಕ್ರೀಡಾ ಶಾಲೆಯ ವಿದ್ಯಾರ್ಥಿಗಳ ಕ್ರೀಡಾ ಚಟುವಟಿಕೆ ಮತ್ತು ಶಿಕ್ಷಣ ವ್ಯವಸ್ಥೆಗೆ ಸಂಬಂಧಿಸಿದಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುವುದು ಎಂದು ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ತಿಳಿಸಿದ್ದಾರೆ.

ಕುಶಾಲನಗರದಲ್ಲಿ ಸುದ್ದಿಗೋಷ್ಠಿಯ ಸಂದರ್ಭ ಕೂಡಿಗೆ ಕ್ರೀಡಾ ಶಾಲೆಯ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರ ನೀಡುತ್ತಾ ಮುಂದಿನ ದಿನಗಳಲ್ಲಿ ಕ್ರೀಡಾ ಶಾಲೆಯ ಅಭಿವೃದ್ಧಿಗೆ ಪೂರಕವಾಗಿ ಬಾಲಕ, ಬಾಲಕಿಯರ ವಸತಿ ಗೃಹಗಳನ್ನು ಮೇಲ್ದರ್ಜೆಗೆ ಏರಿಸುವ, ಮತ್ತು ಸುಸಜ್ಜಿತವಾಗಿ ಶಾಲೆಯ ಬೆಳವಣಿಗೆ, ಮತ್ತು ಕ್ರೀಡಾ ತರಬೇತಿಗೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ಮೈದಾನಗಳ ಅಭಿವೃದ್ಧಿ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒಳಗೊಂಡಂತೆ ಅಭಿವೃದ್ಧಿ ಪಡಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಪ್ರೌಢಶಾಲಾ ವಿದ್ಯಾಭ್ಯಾಸ ಮುಗಿಸಿ ಪದವಿಪೂರ್ವ ತರಗತಿಗೆ ತೆರಳುತ್ತಿರುವ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ನೂತನ ವಸತಿ ಗೃಹ ನಿರ್ಮಾಣ ಮಾಡುವ ಚಿಂತನೆ ಹರಿಸಲಾಗಿದೆ.

ಮುಂದಿನ ದಿನಗಳಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉನ್ನತ ಮಟ್ಟದ ಸಭೆಯನ್ನು ಕರೆದು ಜಿಲ್ಲೆಯ ಕ್ರೀಡಾ ಪದವಿ ತರಗತಿ ತೆರೆಯುವ ಬಗ್ಗೆ ಮಾಹಿತಿ ಪಡೆದು ಕ್ರಮ ಕೈಗೊಳ್ಳಲು ಗಮನ ಹರಿಸಲಾಗುವುದು ಎಂದು ಶಾಸಕರು ತಿಳಿಸಿದ್ದಾರೆ.

ಈ ಸಂದರ್ಭ ಕುಶಾಲನಗರ ತಾಲ್ಲಕು ಗ್ಯಾರಂಟಿ ಅನುμÁ್ಠನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಕೂಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ ಸೇರಿದಂತೆ ವಿವಿಧ ಘಟಕದ ಪದಾಧಿಕಾರಿಗಳು ಹಾಜರಿದ್ದರು.