ಶ್ರೀಮಂಗಲ, ಏ. 9: ಪೆÇನ್ನಂಪೇಟೆ ತಾಲೂಕು ಶ್ರೀಮಂಗಲ ಮತ್ತು ಕುಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಯಿಮಾನಿ, ಕುರ್ಚಿ, ಕಾಕೂರು, ಮಂಚಳ್ಳಿ ಮತ್ತು ತೈಲಾ ಈ ಗ್ರಾಮಗಳಲ್ಲಿ ಬೀಡುಬಿಟ್ಟಿರುವ ಕಾಡಾನೆಗಳನ್ನು ಅರಣ್ಯಕ್ಕೆ ಅಟ್ಟುವ ಕಾರ್ಯಾಚರಣೆಯನ್ನು ಅರಣ್ಯ ಇಲಾಖೆ ತಾ. 10 ರಂದು (ಇಂದು) ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕೈಗೊಳ್ಳಲಿದೆ. ಶ್ರೀಮಂಗಲ ನಾಗರಹೊಳೆ ಮತ್ತು ಪೆÇನ್ನಂಪೇಟೆ ವಲಯ ಅರಣ್ಯ ಅಧಿಕಾರಿಗಳ ನೇತೃತ್ವದಲ್ಲಿ ಜಂಟಿ ಕಾರ್ಯಾಚರಣೆ ನಡೆಯುತ್ತಿದ್ದು, ಈ ಹಿನ್ನೆಲೆ ತೋಟದಲ್ಲಿ ಕೆಲಸ ಮಾಡುವ ಕಾರ್ಮಿಕರು, ಬೆಳೆಗಾರರು ಹಾಗೂ ಸಾರ್ವಜನಿಕರು ಈ ಬಗ್ಗೆ ಜಾಗೃತರಾಗಿ ಸಹಕಾರ ನೀಡಬೇಕೆಂದು ಶ್ರೀಮಂಗಲ ವನ್ಯಜೀವಿ ವಿಭಾಗದ ವಲಯ ಅರಣ್ಯಾಧಿಕಾರಿ ಅರವಿಂದ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.