ಮಡಿಕೇರಿ, ಏ. 9: ನಗರದ ಸಂತ ಮೈಕಲರ ಪ್ರೌಢಶಾಲೆಯಲ್ಲಿ ತಾ. 15 ರವರೆಗೆ 2026 ರ ಎಸ್‍ಎಸ್‍ಎಲ್‍ಸಿ ಪರೀಕ್ಷೆ-1 ರ ಮೌಲ್ಯಮಾಪನ ನಡೆಯಲಿದ್ದು, ಮೌಲ್ಯಮಾಪನ ಸಂದರ್ಭದಲ್ಲಿ ಸಿಬ್ಬಂದಿಗಳನ್ನು ಹೊರತುಪಡಿಸಿ ಈ ಮೌಲ್ಯಮಾಪನ ಕೇಂದ್ರದಲ್ಲಿ ಯಾವುದೇ ಅವ್ಯವಹಾರಗಳಿಲ್ಲದೆ ಸುಗಮವಾಗಿ ಮೌಲ್ಯಮಾಪನ ಕಾರ್ಯ ನಡೆಸುವ ಸಲುವಾಗಿ ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ 2023 ರ ಕಲಂ 163 ರಡಿ ದತ್ತವಾದ ಅಧಿಕಾರದಂತೆ ಮೌಲ್ಯಮಾಪನ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿನ ಪ್ರದೇಶವನ್ನು ನಿರ್ಭಂದಿತ ಸ್ಥಳ ಎಂದು ಘೋಷಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.

ಈ ಆದೇಶವು ಮೌಲ್ಯಮಾಪನ ನಡೆಸುವ ದಿನಗಳಂದು ಬೆಳಗ್ಗೆ 9 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಮಾತ್ರ ಚಾಲ್ತಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.