ಕುಶಾಲನಗರ, ಏ. 10: ಏ. 1 ರಿಂದ ಆರಂಭವಾಗಿರುವ ಜನಗಣತಿಯಲ್ಲಿ ಕೊಡಗು ಜಿಲ್ಲೆಯ ಸರ್ವ ನಾಗರಿಕರು ಕಡ್ಡಾಯವಾಗಿ ಪಾಲ್ಗೊಂಡು ಅಗತ್ಯ ಮಾಹಿತಿ ನೀಡಿ ಸಹಕರಿಸುವಂತೆ ಶಾಸಕ ಡಾ. ಮಂತರ್ ಗೌಡ ಕೋರಿದ್ದಾರೆ.
ಕುಶಾಲನಗರ ಪುರಸಭೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಯೋಜನೆಗಳ ಅನುμÁ್ಠನಕ್ಕೆ ಗಣತಿ ಕಾರ್ಯ ಅತ್ಯಗತ್ಯ. ಈ ಹಿಂದೆ ರಾಜ್ಯ ಸರಕಾರ ನಡೆಸಿದ ಜಾತಿ ಗಣತಿ ಜಿಲ್ಲೆಯಲ್ಲಿ ಅಲ್ಪ ಪ್ರಮಾಣದಲ್ಲಿ ಹಿನ್ನಡೆ ಉಂಟಾಗಿದೆ. ಮುಂದಿನ ದಿನಗಳಲ್ಲಿ ಕ್ಷೇತ್ರ ಪುನರ್ ವಿಂಗಡಣೆ, ಮೀಸಲಾತಿ ನಿಗದಿ, ಎಸ್ಟಿಪಿ, ಟಿಎಸ್ಪಿ, ಇತರ ಅನುದಾನ ಮಂಜೂರಾತಿ ಸೇರಿದಂತೆ ಅಭಿವೃದ್ಧಿ ಯೋಜನೆಗಳ ಅನುμÁ್ಠನಕ್ಕೆ ಗಣತಿ ಸಹಕಾರಿಯಾಗಲಿರುವ ಹಿನ್ನೆಲೆಯಲ್ಲಿ ಎಲ್ಲರೂ ಕಡ್ಡಾಯವಾಗಿ ಜನಗಣತಿಯಲ್ಲಿ ಭಾಗಿಯಾಗಬೇಕು. ಅದರಲ್ಲೂ ಜಿಲ್ಲೆಯಿಂದ ಹೊರಗಡೆ ನೆಲೆಸಿರುವವರು ಕೊಡಗಿನ ಮೂಲ ವಿಳಾಸ ನೀಡಿ ಘೋಷಣೆ ಮಾಡಿಕೊಳ್ಳಬೇಕಿದೆ ಎಂದು ಮನವಿ ಮಾಡಿದರು. ಈ ಸಂದರ್ಭ ಮಾತನಾಡಿದ ಕುಶಾಲನಗರ ತಾಲೂಕು ತಹಶೀಲ್ದಾರ್ ಜನಗಣತಿ ಹಿನ್ನೆಲೆಯಲ್ಲಿ ಈಗಾಗಲೇ ಅಗತ್ಯ ಸಿಬ್ಬಂದಿಗಳಿಗೆ ತರಬೇತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಇದೇ ಸಂದರ್ಭ ಜನಗಣತಿ ಕೈಪಿಡಿ ಬಿಡುಗಡೆಗೊಳಿಸಲಾಯಿತು.
ಗೋಷ್ಠಿಯಲ್ಲಿ ಕುಶಾಲನಗರ ತಾಲೂಕು ಗ್ಯಾರಂಟಿ ಯೋಜನೆಗಳ ಅನುμÁ್ಠನ ಸಮಿತಿ ಅಧ್ಯಕ್ಷ ವಿ.ಪಿ. ಶಶಿಧರ್, ಕುಶಾಲನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ತಾಪಂ ಕಾರ್ಯನಿರ್ವಹಣಾಧಿಕಾರಿ ಪರಮೇಶ್, ಆಡಳಿತಾಧಿಕಾರಿ ಅಬ್ದುಲ್ ನಭಿ, ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಇದ್ದರು.