ನಾಪೆÇೀಕ್ಲು, ಏ. 10 : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಾತ್ಸಲ್ಯ ಫಲಾನುಭವಿಗಳಿಗೆ ಹಣ್ಣು ಹಂಪಲು ವಿತರಿಸ ಲಾಯಿತು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ನರಿಯಂದಡ ಗ್ರಾಮ ಪಂಚಾಯಿತಿಗೆ ಒಳಪಟ್ಟ ಗ್ರಾಮದ ವಾತ್ಸಲ್ಯ ಫಲಾನುಭವಿಗಳಾದ ಕೊಕೇರಿ ಗ್ರಾಮದ ಜಾಜಿ ಮತ್ತು ರಮ್ಯ, ಮರಂದೋಡ ಗ್ರಾಮದ ಶೀಲಾ, ಅರಪಟ್ಟು ಗ್ರಾಮದ ವಿಷ್ಣು ಇವರುಗಳ ಮನೆಗೆ ತೆರಳಿ ಹೇಮಾವತಿ ವಿ. ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಹಣ್ಣು ಹಂಪಲು ವಿತರಣೆ ಮಾಡಿ ಯೋಗಕ್ಷೇಮ ವಿಚಾರಿಸಲಾಯಿತು.

ಈ ಸಂದರ್ಭ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಲಯ ಮೇಲ್ವಿಚಾರದ ಸುನಿಲ್ ಕುಮಾರ್, ಒಕ್ಕೂಟದ ಅಧ್ಯಕ್ಷೆ ಮಾಚಮ್ಮ, ಸೇವಾ ಪ್ರತಿನಿಧಿ ಪ್ರಭಾ ಉಪಸ್ಥಿತರಿದ್ದರು.