ಚೆಯ್ಯಂಡಾಣೆ, ಏ. 11: ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರದ ವತಿಯಿಂದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸದಸ್ಯರಿಗೆ ಉಚಿತ ದಂತ ವೈದ್ಯಕೀಯ ತಪಾಸಣಾ ಶಿಬಿರ ಬಾವಲಿಯಲ್ಲಿ ಇತ್ತೀಚೆಗೆ ನಡೆಯಿತು.
ಬಾವಲಿಯ ಸಮುದಾಯ ಭವನದಲ್ಲಿ ನಡೆದ ಶಿಬಿರದಲ್ಲಿ ನಾಪೆÇೀಕ್ಲು ಸಮುದಾಯ ಆರೋಗ್ಯ ಕೇಂದ್ರದ ದಂತ ವೈದ್ಯಾಧಿಕಾರಿ ಡಾ. ಫಾತಿಮಾ ಶಿಬಿರದ ನೇತೃತ್ವ ವಹಿಸಿ ಮಾತನಾಡಿದರು.
25ಕ್ಕೂ ಅಧಿಕ ಮಂದಿ ಉಚಿತ ತಪಾಸಣಾ ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಈ ಸಂದರ್ಭ ಗ್ರಾಮಾಭಿವೃದ್ಧಿ ಯೋಜನೆಯ ಕೌನ್ಸಿಲರ್ ನಿರ್ಮಲ, ಸೇವಾ ಪ್ರತಿನಿಧಿ ಮಂಜುಳಾ, ಸಂಘದ ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.