ಮಡಿಕೇರಿ, ಏ.11 : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ 24ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ತಾ.11ರಂದು ಗೆಲುವು ಸಾಧಿಸಿದ ತಂಡಗಳು.
ಮೈದಾನ 1ರಲ್ಲಿ ಕಟ್ಟೇರ (ಅರಮೇರಿ) ಮತ್ತು ಅಮ್ಮಾಟಂಡ ತಂಡಗಳ ನಡುವಿನ ಹಣಾಹಣಿಯಲ್ಲಿ ಅಮ್ಮಾಟಂಡ 7 ವಿಕೆಟ್‍ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಟ್ಟೇರ 6 ಓವರ್‍ಗಳಲ್ಲಿ 5 ವಿಕೆಟ್ 73 ರನ್ ಗಳಿಸಿತು. ಅಮ್ಮಾಟಂಡ 5 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 77 ರನ್ ಗಳಿಸಿ ಗೆಲುವು ಸಾಧಿಸಿತು.
ಪಾಲಂದಿರ ಮತ್ತು ಹೊಟ್ಟೆಂಗಡ ನಡುವಿನ ಪಂದ್ಯದಲ್ಲಿ ಪಾಲಂದಿರ 58 ರನ್‍ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಪಾಲಂದಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 140 ರನ್‍ಗಳಿಸಿತು. ಹೊಟ್ಟೆಂಗಡ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 82 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಕಾಳಚಂಡ ಮತ್ತು ಚಾರಿಮಂಡ ತಂಡಗಳ ನಡುವಿನ ಪಂದ್ಯದಲ್ಲಿ ಚಾರಿಮಂಡ 10 ವಿಕೆಟ್ ಗಳಿಂದ ಗೆಲುವು ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಕಾಳಚಂಡ 6 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ 42 ರನ್ ಗಳಿಸಿತು. ಚಾರಿಮಂಡ ಕೇವಲ 1.5 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 46 ರನ್‍ಗಳನ್ನು ಗಳಿಸಿ ಜಯ ತನ್ನದಾಗಿಸಿಕೊಂಡಿತು.
ಆಪಟ್ಟಿರ ಮತ್ತು ಮಲ್ಚಿರ ತಂಡಗಳ ನಡುವಿನ ಪಂದ್ಯದಲ್ಲಿ ಮಲ್ಚಿರ ತಂಡಕ್ಕೆ 4 ರನ್ ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಲ್ಚಿರ 6 ಓವರ್‍ಗಳಲ್ಲಿ 7 ವಿಕೆಟ್ ನಷ್ಟಕ್ಕೆ 78 ರನ್ ಗಳನ್ನು ಗಳಿಸಿತು. ಇದನ್ನು ಬೆನ್ನಟ್ಟಿದ ಆಪಟ್ಟಿರ 6 ಓವರ್‍ಗಳಲ್ಲಿ 2 ವಿಕೆಟ್ ನಷ್ಟಕ್ಕೆ 74 ರನ್‍ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.
ಚೆಟ್ಟಿಯಾರಂಡ ಮತ್ತು ತಂಬುಕುತ್ತೀರ ನಡುವಿನ ಪಂದ್ಯದಲ್ಲಿ ತಂಬುಕುತ್ತೀರ ಭರ್ಜರಿ 10 ವಿಕೆಟ್ ಗಳ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಚೆಟ್ಟಿಯಾರಂಡ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 52 ರನ್‍ಗಳನ್ನು ಗಳಿಸಿತು. ತಂಬುಕುತ್ತೀರ 3 ಓವರ್‍ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 53 ರನ್ ಗಳಿಸಿ ಜಯಭೇರಿ ಬಾರಿಸಿತು.
ಸಣ್ಣುವಂಡ ಮತ್ತು ಕುಪ್ಪಂಡ (ನಾಂಗಾಲ) ತಂಡಗಳ ನಡುವಿನ ಪಂದ್ಯದಲ್ಲಿ ಸಣ್ಣುವಂಡ 41 ರನ್ ಗಳ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಸಣ್ಣುವಂಡ 5 ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ 123 ರನ್ ಗಳಿಸಿತು. ಇದನ್ನು ಬೆನ್ನಟ್ಟಿದ ಕುಪ್ಪಂಡ 5 ಓವರ್‍ಗಳಲ್ಲಿ 2 ವಿಕೆಟ್ ನಷ್ಟಕ್ಕೆ 82 ರನ್ ಗಳಿಸಿ ಮಾತ್ರ ಸೇರಿಸಿ ಸೋಲು ಕಂಡಿತು.
ಉದ್ದಪ್ಪಂಡ ಮತ್ತು ತಾಚಮಂಡ (ಗರ್ವಾಲೆ) ನಡುವಿನ ಪಂದ್ಯದಲ್ಲಿ ತಾಚಮಂಡ ತಂಡಕ್ಕೆ 42 ರನ್ ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ತಾಚಮಂಡ 6 ಓವರ್‍ಗಳಲ್ಲಿ 2 ವಿಕೆಟ್ ನಷ್ಟಕ್ಕೆ 89 ರನ್ ಗಳಿಸಿತು. ಉದ್ದಪಂಡ 6 ಓವರ್‍ಗಳಲ್ಲಿ 6 ವಿಕೆಟ್ ನಷ್ಟಕ್ಕೆ 47 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಬೊಜ್ಜಂಗಡ ಮತ್ತು ಅವರೆಮಾಡಂಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಜ್ಜಂಗಡ ತಂಡಕ್ಕೆ 44 ರನ್ ಗಳ ಗೆಲುವು ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಬೊಜ್ಜಂಗಡ 6 ಓವರ್‍ಗಳಲ್ಲಿ 3 ವಿಕೆಟ್ ನಷ್ಟಕ್ಕೆ 81 ರನ್‍ಗಳಿಸಿತು. ಅವರೆಮಾಡಂಡ 6 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ ಕೇವಲ 37 ರನ್ ಗಳಿಸಿ ಸೋಲು ಅನುಭವಿಸಿತು.
ಮೈದಾನ 2ರಲ್ಲಿ ಪರುವಂಡ ಮತ್ತು ನಾಯಕಂಡ ತಂಡಗಳ ನಡುವಿನ ಪಂದ್ಯದಲ್ಲಿ ಪರುವಂಡ 3 ರನ್ ಗಳಿಂದ ಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪರುವಂಡ 6 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 46 ರನ್‍ಗಳಿಸಿತು. ನಾಯಕಂಡ 6 ಓವರ್‍ಗಳಲ್ಲಿ 4 ವಿಕೆಟ್ ನಷ್ಟಕ್ಕೆ 43 ರನ್ ಗಳಿಸಿ ಸೋಲೊಪ್ಪಿಕೊಂಡಿತು.
ಪುದಿಯಂಡ ಮತ್ತು ಬೇರೆರ ನಡುವಿನ ಪಂದ್ಯದಲ್ಲಿ 25 ರನ್‍ಗಳಿಂದ ಬೇರೆರ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬೇರೆರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 67 ರನ್‍ಗಳನ್ನು ಗಳಿಸಿತು. ಪುದಿಯಂಡ 6 ಓವರ್‍ಗಳಲ್ಲಿ 1 ವಿಕೆಟ್ ನಷ್ಟಕ್ಕೆ 42 ಗಳಿಸಿ ಸೋಲು ಕಂಡಿತು.
ಮುಂಡೋಟಿರ ಮತ್ತು ಕಾಡ್ಯಮಾಡ ತಂಡಗಳ ನಡುವಿನ ಪಂದ್ಯದಲ್ಲಿ ಕಾಡ್ಯಮಾಡ 4 ರನ್ ಗಳಿಂದ ವಿಜಯ ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕಾಡ್ಯಮಾಡ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 56 ರನ್‍ಗಳನ್ನು ಸೇರಿಸಿತು. ಮುಂಡೋಟಿರ 6 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 52 ರನ್ ಗಳಿಸಿ ಸೋಲು ಅನುಭವಿಸಿತು.
ಕರ್ತಮಾಡ ಮತ್ತು ನಾಪಂಡ (ಕಾರುಗುಂದ) ನಡುವಿನ ಪಂದ್ಯದಲ್ಲಿ ಕರ್ತಮಾಡ 9 ವಿಕೆಟ್ ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದÀ ನಾಪಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 45 ರನ್‍ಗಳಿಸಿತು. ಇದನ್ನು ಬೆನ್ನತ್ತಿದ ಕರ್ತಮಾಡ 3.5 ಓವರ್ ಗಳಲ್ಲಿ 1 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿ ಗೆಲುವಿನ ನಗು ಬೀರಿತು.
ಚಂಗುಲಂಡ ಮತ್ತು ಕೋಡಿಮಣಿಯಂಡ ತಂಡಗಳ ನಡುವಿನ ಪಂದ್ಯದಲ್ಲಿ ಚಂಗುಲಂಡ ಭರ್ಜರಿ 10 ವಿಕೆಟ್‍ಗಳ ಜಯ ಸಾಧಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದÀ ಕೋಡಿಮಣಿಯಂಡ 6 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 48 ರನ್‍ಗಳನ್ನು ಚಂಗುಲಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ ಕೇವಲ 2.3 ಓವರ್ ಗಳಲ್ಲಿ 50 ರನ್‍ಗಳನ್ನು ಗಳಿಸಿ ಗೆಲುವು ಕಂಡಿತು.
ಮಾದೇಟಿರ ಮತ್ತು ಕುಂಡ್ರಂಡ ನಡುವಿನ ಹಣಾಹಣಿಯಲ್ಲಿ ಮಾದೇಟಿರ 8 ವಿಕೆಟ್ ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕುಂಡ್ರಂಡ 6 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 81 ರನ್ ಗಳಿಸಿತು. ಮಾದೇಟಿರ 5.4 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 82 ರನ್ ಗಳನ್ನು ಗಳಿಸಿ ಜಯ ಸಾಧಿಸಿತು.