ಮಡಿಕೇರಿ, ಏ. ೧೨: ತಾ. ೨೦ ರಂದು ಕೊಡಗು ಜಿಲ್ಲಾಡಳಿತದ ವತಿಯಿಂದ ನಡೆಯಲಿರುವ ಬಸವ ಜಯಂತಿಯ ಆರ್ಥಪೂರ್ಣ ಆಚರಣೆಗೆ ಜಿಲ್ಲಾ ಅಪರ ಜಿಲ್ಲಾಧಿಕಾರಿ ಡಾ. ಐಶ್ವರ್ಯ ಕರೆಕೊಟ್ಟರು.
ತಮ್ಮ ಕಚೇರಿಯಲ್ಲಿ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಕಾಯಕಯೋಗಿ ಬಸವೇಶ್ವರರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿರುವ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅಧಿಕಾರಿಗಳು ಬಸವ ಅನುಯಾಯಿಗಳೊಂದಿಗೆ ಚರ್ಚಿಸಿ ಸಾರ್ವಜನಿಕರು ಹಾಗೂ ಸಂಘ-ಸAಸ್ಥೆಗಳ ಸಹಭಾಗಿತ್ವದೊಂದಿಗೆ ಬಸವ ಜಯಂತಿಯ ಅರ್ಥಪೂರ್ಣ ಆಚರಣೆಗೆ ಡಾ. ಐಶ್ವರ್ಯ ಕರೆಕೊಟ್ಟರು.
ಈ ಸಂದರ್ಭ ಮಾತನಾಡಿದ ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ್, ಕೊಡಗು ವೀರಶೈವ ಮಹಾಸಭಾ ಪದಾಧಿಕಾರಿಗಳ ಸಹಕಾರದೊಂದಿಗೆ ಬಸವ ಜಯಂತಿ ಆಚರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಮಡಿಕೇರಿ ಅರಮನೆ ಆವರಣದಿಂದ ಅಂದು ಬೆಳಿಗ್ಗೆ ೧೦ ಗಂಟೆಗೆ ಬಸವೇಶ್ವರರ ಭಾವಚಿತ್ರವನ್ನು ಅಲಂಕೃತ ಬೆಳ್ಳಿ ರಥದಲ್ಲಿ ವಿವಿಧ ಕಲಾ ತಂಡಗಳೊAದಿಗೆ ಗಾಂಧಿ ಭವನದವರೆಗೂ ಮೆರವಣಿಗೆ ನಡೆಸುವ ಬಗ್ಗೆ ವಿವರಣೆ ನೀಡಿದರು. ಬಳಿಕ ಗಾಂಧಿ ಭವನದಲ್ಲಿ ಬಸವ ಜಯಂತಿ ಕಾರ್ಯಕ್ರಮ ನಡೆಯುವ ಬಗ್ಗೆ ವಿವರಿಸಿದರು. ಜಿಲ್ಲಾ ವೀರಶೈವ ಮಹಾಸಭಾ ಅಧ್ಯಕ್ಷ ಹೆಚ್.ವಿ. ಶಿವಪ್ಪ, ಪ್ರಧಾನ ಕಾರ್ಯದರ್ಶಿ ಶಾಂಬಶಿವಯ್ಯ, ಖಜಾಂಚಿ ಹೆಚ್.ಪಿ. ಉದಯಕುಮಾರ್, ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಕೆ.ಎಸ್. ಮೂರ್ತಿ, ಪ್ರಧಾನ ಕಾರ್ಯದರ್ಶಿ ಬಿ. ನಟರಾಜು, ಸಮಾಜದ ಪ್ರಮುಖರಾದ ಮಡಿಕೇರಿಯ ಕೆ.ಎಸ್. ಪ್ರದೀಪ್ ಕುಮಾರ್, ಉದ್ಯಮಿ ಕುಮಾರ್ ಇದ್ದರು.