ಭಾಗಮಂಡಲ, ಏ. ೧೨: ಭಾಗಮಂಡಲ ಪ್ರಾದೇಶಿಕ ಅರಣ್ಯ ವಲಯ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ಭಾಗಮಂಡಲದ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಭಾಗಮಂಡಲ ಶಾಖೆಯ ಕಾಡಂಚಿನ ಗ್ರಾಮಸ್ಥರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಹಮ್ಮಿಕೊಳ್ಳಲಾಯಿತು.

ಕುಂದಚೇರಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಗ್ರಾಮಸ್ಥರಿಗೆ ವಿವಿಧ ರೀತಿ ಆರೋಗ್ಯ ತಪಾಸಣೆ ನಡೆಸಲಾಯಿತು.

ಕಾರ್ಯಕ್ರಮದಲ್ಲಿ ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಶಸ್ತçಚಿಕಿತ್ಸಕ ಡಾ. ನಂಜುAಡಯ್ಯ ಉದ್ಘಾಟಿಸಿದರು. ಭಾಗಮಂಡಲ ವಲಯ ಅರಣ್ಯಾಧಿಕಾರಿ ಬಿ.ಎಂ. ಶಂಕರ ಪ್ರಾಸ್ತಾವಿಕ ಭಾಷಣ ಮಾಡಿದರು. ಭಾಗಮಂಡಲ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಸುನಿಲ್, ಉಪ ವಲಯ ಅರಣ್ಯಾಧಿಕಾರಿ ಸಿದ್ದಲಿಂಗಪ್ಪ ಭಾಗಿ, ಉಪವಲಯ ಅರಣ್ಯ ಅಧಿಕಾರಿ ಎಂ.ಯು. ಮೀನಾಕ್ಷಿ ಪಾಲ್ಗೊಂಡಿದ್ದರು. ಶಿಬಿರದಲ್ಲಿ ೧೭೨ ಮಂದಿ ಭಾಗವಹಿಸಿ ಆರೋಗ್ಯ ತಪಾಸಣೆಯನ್ನು ಮಾಡಿಸಿಕೊಂಡರು.