ಮಡಿಕೇರಿ ಏ.೧೨ : ಕೊಡವ ಕುಟುಂಬಗಳ ನಡುವೆ ಮೂರ್ನಾಡಿನಲ್ಲಿ ನಡೆಯುತ್ತಿರುವ ೨೪ನೇ ವರ್ಷದ ‘ಬೇತ್ರಿ ಮುಕ್ಕಾಟಿರ ಕಪ್ ಕ್ರಿಕೆಟ್ ನಮ್ಮೆ’ ಯಲ್ಲಿ ಏ.೧೨ರಂದು ಗೆಲುವು ಸಾಧಿಸಿದ ತಂಡಗಳು.

ಮೈದಾನ ೧ರಲ್ಲಿ ಬೊಳಂದAಡ ಮತ್ತು ಮುಂಡAಡ ತಂಡಗಳ ನಡುವಿನ ಪಂದ್ಯದಲ್ಲಿ ಮುಂಡAಡ ೧೪ ರನ್‌ಗಳಿಂದ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮುಂಡAಡ ತಂಡ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೬೪ ರನ್ ಗಳಿಸಿತು. ಬೊಳಂದAಡ ೬ ಓವರ್‌ಗಳಲ್ಲಿ ೭ ವಿಕೆಟ್ ನಷ್ಟಕ್ಕೆ ೫೦ ರನ್‌ಗಳನ್ನು ಗಳಿಸಿ ಸೋಲೊಪ್ಪಿಕೊಂಡಿತು.

ಪಡೆಯೆಟ್ಟಿರ ಮತ್ತು ಮಂದತAಡ ನಡುವಿನ ಪಂದ್ಯದಲ್ಲಿ ಮಂದತAಡ ತಂಡಕ್ಕೆ ೯ ವಿಕೆಟ್‌ಗಳ ಜಯ ಲಭಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಡೆಯೆಟ್ಟಿರ ೬ ಓವರ್‌ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೩೮ ರನ್ ಗಳನ್ನು ಗಳಿಸಿತು. ಮಂದತAಡ ೨ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೪೧ ರನ್ ಗಳಿಸಿ ಗೆಲುವಿನ ನಗುಬೀರಿತು.

ಕಲ್ಲೇಂಗಡ (ಬೇಳೂರು) ಮತ್ತು ಮಾದೆಯಂಡ (ಎಂ.ಬಾಡಗ) ತಂಡಗಳ ನಡುವಿನ ಪಂದ್ಯದಲ್ಲಿ ಮಾದೆಯಂಡ ೧೭ ರನ್‌ಗಳಿಂದ ಜಯ ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮಾದೆಯಂಡ ೬ ಓವರ್‌ಗಳಲ್ಲಿ ೧ ವಿಕೆಟ್ ನಷ್ಟಕ್ಕೆ ೮೭ ರನ್ ಗಳಿಸಿತು. ಕಲ್ಲೇಂಗಡ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೭೦ ರನ್‌ಗಳಿಸಿ ಸೋಲು ಕಂಡಿತು.

ಕೊಚ್ಚೆರ ಮತ್ತು ಕೈಪಟ್ಟಿರ ನಡುವಿನ ಪಂದ್ಯದಲ್ಲಿ ಕೊಚ್ಚೆರ ತಂಡಕ್ಕೆ ೨ ರನ್‌ಗಳ ಜಯ ಲಭಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಕೊಚ್ಚೆರ ೬ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೩೯ ರನ್ ಗಳಿಸಿತು. ಕೈಪಟ್ಟಿರ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೩೭ ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಅಜ್ಜಿಕುಟ್ಟಿರ ಮತ್ತು ಚೆನ್ನಪಂಡ ತಂಡಗಳ ನಡುವಿನ ಹಣಾಹಣಿಯಲ್ಲಿ ಅಜ್ಜಿಕುಟ್ಟಿರ ೫ ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದುಕೊಂಡಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಚೆನ್ನಪಂಡ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೫೮ ರನ್ ಗಳಿಸಿತು. ಅಜ್ಜಿಕುಟ್ಟಿರ ತಂಡ ೪.೫ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೬೨ ರನ್ ಗಳಿಸಿ ಗೆಲುವು ಸಾಧಿಸಿತು.

ಮೈದಾನ ೨ರಲ್ಲಿ ಮೂಕೊಂಡ ಮತ್ತು ಮೇದುರ ತಂಡಗಳ ನಡುವಿನ ಪಂದ್ಯದಲ್ಲಿ ಮೂಕೊಂಡ ೪೨ ರನ್‌ಗಳಿಂದ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೂಕೊಂಡ ೬ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೬೫ ರನ್ ಗಳಿಸಿತು. ಇದನ್ನು ಬೆನ್ನತ್ತಿದ ಮೇದುರ ೬ ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಕೇವಲ ೨೩ ರನ್ ಗಳಿಸಿ ಸೋಲು ಅನುಭವಿಸಿತು. ಕರವಟ್ಟಿರ ಮತ್ತು ಮಾಚೆಟ್ಟಿರ (ಬಾಳುಗೋಡು) ನಡುವಿನ ಪಂದ್ಯದಲ್ಲಿ ಮಾಚೆಟ್ಟಿರ ೫ ರನ್‌ಗಳ ಜಯ ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಮಾಚೆಟ್ಟಿರ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೫೨ ರನ್ ಗಳಿಸಿತು. ಕರವಟ್ಟಿರÀ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೪೭ ರನ್ ಗಳಿಸಿ ಸೋಲುಕಂಡಿತು. ಬೊಳ್ಳಚೆಟ್ಟಿರ ಮತ್ತು ಕೊಕ್ಕೇಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಬೊಳ್ಳಚೆಟ್ಟಿರ ೪ ರನ್‌ಗಳ ಜಯ ಸಾಧಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಬೊಳ್ಳಚಟ್ಟಿರ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೬೨ ರನ್ ಗಳಿಸಿತು. ಕೊಕ್ಕೆಂಗಡ ೬ ಓವರ್‌ಗಳಲ್ಲಿ ೪ ವಿಕೆಟ್ ನಷ್ಟಕ್ಕೆ ೫೮ ರನ್ ಗಳಿಸಿ ಸೋಲೊಪ್ಪಿಕೊಂಡಿತು.

ಪುಟ್ಟಿಚAಡ (ಬೊಳ್ಳರಿಮಾಡು) ಮತ್ತು ಬಾಚಿರ ನಡುವಿನ ಪಂದ್ಯದಲ್ಲಿ ೧೩ ರನ್‌ಗಳಿಂದ ಬಾಚಿರ ಗೆಲುವು ಸಾಧಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಬಾಚಿರ ೬ ಓವರ್ ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೬೯ ರನ್ ಗಳಿಸಿತು. ಪುಟ್ಟಿಚಂಡ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೫೬ ರನ್ ಗಳಿಸಿ ಸೋಲು ಕಂಡಿತು.

ಕೊಳುವAಡ ಮತ್ತು ಆಟ್ರಂಗಡ ತಂಡಗಳ ನಡುವಿನ ಪಂದ್ಯದಲ್ಲಿ ಆಟ್ರಂಗಡ ೧೦ ವಿಕೆಟ್‌ಗಳಿಂದ ಭರ್ಜರಿ ಗೆಲುವು ದಾಖಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಕೊಳುವಂಡ ೬ ಓವರ್‌ಗಳಲ್ಲಿ ೫ ವಿಕೆಟ್ ನಷ್ಟಕ್ಕೆ ೩೮ ರನ್ ಗಳಿಸಿತು. ಆಟ್ರಂಗಡ ೨ ಓವರ್ ಗಳಲ್ಲಿ ಯಾವುದೇ ವಿಕೆಟ್ ನಷ್ಟವಿಲ್ಲದೆ ೩೯ ರನ್ ಗಳಿಸಿ ಜಯ ಸಾಧಿಸಿತು.

ಮೋಟನಾಳಿರ ಮತ್ತು ಗಾಂಡAಗಡ ತಂಡಗಳ ನಡುವಿನ ಪಂದ್ಯದಲ್ಲಿ ಮೋಟನಾಳಿರ ೬೨ ರನ್‌ಗಳಿಂದ ಗೆಲುವು ದಾಖಲಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಮೋಟನಾಳಿರ ೬ ಓವರ್‌ಗಳಲ್ಲಿ ೩ ವಿಕೆಟ್ ನಷ್ಟಕ್ಕೆ ೧೦೯ ರನ್ ಗಳಿಸಿತು. ಗಾಂಡAಗಡ ೬ ಓವರ್‌ಗಳಲ್ಲಿ ೨ ವಿಕೆಟ್ ನಷ್ಟಕ್ಕೆ ೪೮ ರನ್ ಗಳಿಸಿ ಸೋತಿತು. ಕೈಬಿಲಿರ ಮತ್ತು ಕುಟ್ಟಂಡ (ಅಮ್ಮತ್ತಿ) ನಡುವಿನ ಹಣಾಹಣಿಯಲ್ಲಿ ಕೈಬಿಲಿರ ೫೧ ರನ್ ಗಳಿಂದ ಪಂದ್ಯ ಗೆದ್ದಿತು.. ಕೈಬಿಲಿರ ಟಾಸ್ ಸೋತು ೬ ಓವರ್‌ಗಳಲ್ಲಿ ೬ ವಿಕೆಟ್ ನಷ್ಟಕ್ಕೆ ೮೯ ರನ್ ಗಳಿಸಿತು. ಕುಟ್ಟಂಡ ೬ ಓವರ್‌ಗಳಲ್ಲಿ ೪ ವಿಕೆಟ್ ಕಳೆದುಕೊಂಡು ೩೯ ರನ್‌ಗಳಿಸಿ ಸೋಲು ಕಂಡಿತು.