ಕೂಡಿಗೆ, ಏ. ೧೨: ದ್ವಿತೀಯ ಪಿಯುಸಿ ಪರೀಕ್ಷೆಯ ಕಲಾ ವಿಭಾಗದಲ್ಲಿ ಜಿಲ್ಲೆಗೆ ದ್ವಿತೀಯ ರ‍್ಯಾಂಕ್ ಪಡೆದ ಕೂಡಿಗೆ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಂದಿತಾಳಿಗೆ ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ವೇದಿಕೆ ಜಿಲ್ಲಾಧ್ಯಕ್ಷ ಬಿ.ಎ. ದಿನೇಶ್ ಶೆಟ್ಟಿ, ಜಿಲ್ಲಾ ಸಂಚಾಲಕ ಎಂ.ಎಸ್. ಮಣಿಕಂಠ, ಪ್ರಧಾನ ಕಾರ್ಯದರ್ಶಿ ಕೃಷ್ಣ, ಉಪಾಧ್ಯಕ್ಷೆ ನಿರ್ಮಲಾ ಸುರೇಶ್, ಕಾರ್ಯದರ್ಶಿ ಸರಳಾ ರಾಮಣ್ಣ, ಗೌರವಾಧ್ಯಕ್ಷ ನಾಗರಾಜ ಹೆಚ್ ಕಾವಲ್‌ಕೊಂಡ, ಕುಶಾಲನಗರ ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿ, ಕಾರ್ಯದರ್ಶಿ ಅನಸೂಯಾ, ಮುಖಂಡರಾದ ಪುಟ್ಟಮ್ಮ, ಕಾಲೇಜು ಪ್ರಾಂಶುಪಾಲ ಹಂಡ್ರAಗಿ ನಾಗರಾಜ್, ನಂದಿತಾ ಪೋಷಕರು ಸೇರಿದಂತೆ ಉಪನ್ಯಾಸಕರು ಹಾಜರಿದ್ದರು.