ಸೋಮವಾರಪೇಟೆ, ಏ. ೧೩: ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆಗಳ ಆಶ್ರಯದಲ್ಲಿ ತಾಲೂಕಿನ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ ತಾ. ೧೪ರಂದು (ಇಂದು) ಬೆಳಿಗ್ಗೆ ೧೦.೩೦ಕ್ಕೆ ಸ್ಥಳೀಯ ಚನ್ನಬಸಪ್ಪ ಸಭಾಂಗಣದಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ.
ತಾ. ೧೪ರಂದು ಬೆಳಿಗ್ಗೆ ೧೦ ಗಂಟೆಗೆ ಪಟ್ಟಣದ ಅಂಬೇಡ್ಕರ್ ಪ್ರತಿಮೆ ಬಳಿಯಿಂದ ಚನ್ನಬಸಪ್ಪ ಸಭಾಂಗಣದವರೆಗೆ ಮೆರವಣಿಗೆ ನಡೆಯಲಿದೆ. ಕಾರ್ಯಕ್ರಮದಲ್ಲಿ ಶಾಸಕ ಡಾ. ಮಂತರ್ ಗೌಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಜಿ.ಎಂ. ಕಾಂತರಾಜು, ಯೋಜನಾ ಪ್ರಾಧಿಕಾರ ಅಧ್ಯಕ್ಷ ಕೆ.ಎ. ಆದಂ ಸೇರಿದಂತೆ ಇತರರು ಭಾಗಿಯಾಗಲಿದ್ದು, ಮಡಿಕೇರಿ ಡಿಎಡ್ ಕಾಲೇಜು ಪ್ರಾಂಶುಪಾಲ ಕುಮಾರ್ ಅವರು ಮುಖ್ಯ ಭಾಷಣ ಮಾಡಲಿದ್ದಾರೆ ಎಂದು ರಾಷ್ಟಿçÃಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷ ಹಾಗೂ ತಹಶೀಲ್ದಾರ್ರಾದ ಕೆ.ಕೆ. ಕೃಷ್ಣಮೂರ್ತಿ ತಿಳಿಸಿದ್ದಾರೆ.