ಮಡಿಕೇರಿ, ಏ. ೧೩: ಕೊಡವ ಅಭಿವೃದ್ಧಿ ನಿಗಮ ಶ್ರೇಷ್ಠ ಕೊಡುಗೆಯಾಗಿದ್ದು, ಇದು ಯುಕೊ ಸಂಘಟನೆಯ ಪರಿಕಲ್ಪನೆ, ಹೋರಾಟಕ್ಕೆ ಸಿಕ್ಕ ಪ್ರತಿಫಲವಾಗಿದೆ, ಕೊಡವರು ಇದನ್ನು ಸಮಗ್ರವಾಗಿ ಬಳಸಿಕೊಳ್ಳುವ ನಿಟ್ಟಿನಲ್ಲಿ ಚಿಂತಿಸಬೇಕು ಎಂದು ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ಹೇಳಿದರು.

ಅರೆಕಾಡು- ಹೊಸ್ಕೇರಿ ಗ್ರಾಮದಲ್ಲಿ ಕೊಡವ ವೆಲ್‌ಫೇರ್ ಮತ್ತು ರಿಕ್ರಿಯೇಶನ್ ಅಸೋಸಿಯೇಷನ್ ವತಿಯಿಂದ ನೂತನವಾಗಿ ನಿರ್ಮಾಣಗೊಂಡಿರುವ ‘ಕೊಡವ ಭವನ’ದಲ್ಲಿ ಅಸೋಸಿಯೇಷನ್ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ ಅಧ್ಯಕ್ಷತೆಯಲ್ಲಿ ಏರ್ಪಡಿಸಿದ್ದ ಚಿಂತನಾ ಸಭೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು ಕೊಡವರ ಸಮಗ್ರ ಅಭಿವೃದ್ಧಿಯ ಹಿತದೃಷ್ಠಿಯಿಂದ ನೂತನವಾಗಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸಬೇಕೆಂದು ಸರ್ಕಾರಕ್ಕೆ ಬೇಡಿಕೆಯನ್ನಿಟ್ಟು ಕಳೆದ ಒಂದು ದಶಕದಿಂದ ವ್ಯವಸ್ಥಿತವಾಗಿ ಹೋರಾಟ ನಡೆಸುತ್ತಾ ಬರಲಾಗಿತ್ತು. ಇದೀಗ ವೀರಾಜಪೇಟೆ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟೀರ ಎಸ್. ಪೊನ್ನಣ್ಣನವರು ಕೊಡವರಿಗಾಗಿ ಪ್ರತ್ಯೇಕ ಅಭಿವೃದ್ಧಿ ನಿಗಮವನ್ನು ಘೋಷಿಸುವಂತಾಗಿದೆ ಎಂದರು.

ಜಗತ್ತು ಕೊಡವರು ವಿಶಿಷ್ಟ ಜನಾಂಗವೆAಬ ಬಿರುದನ್ನು ನೀಡಿದ್ದು, ಇದನ್ನು ಪ್ರತಿಯೊಬ್ಬ ಕೊಡವರೂ ಹೆಮ್ಮೆಯಿಂದ ಹೇಳಿಕೊಳ್ಳುತ್ತಾರೆ. ಆದರೆ ಕೊಡವರು ತಮ್ಮ ನೆಲ ಜಲ. ಭಾಷೆ, ಪರಂಪರೆ ಹಾಗೂ ಸಂಸ್ಕೃತಿಯೆಡೆಗೆ ನಿರ್ಲಕ್ಷ ವಹಿಸಿದರೆ ಕೊಡವರ ವೈಶಿಷ್ಟö್ಯತೆ ಉಳಿಯಲು ಸಾಧ್ಯವಿಲ್ಲ. ಕೇವಲ ತೋರಿಕೆಯ ಕೊಡವಾಮೆಯಿಂದ ಯಾವುದೇ ಪ್ರಯೋಜನವಿಲ್ಲ. ಕೊಡವಾಮೆಯ ಸಮಗ್ರತೆಯೊಂದಿಗೆ ಜೀವಿಸಬೇಕು ಈ ನಿಟ್ಟಿನಲ್ಲಿ ಇಂದಿನ ಹಿರಿಯರು ಮುಂದಿನ ಪೀಳಿಗೆಗೆ ಮೇಲ್ಪಂಕ್ತಿಯನ್ನು ಹಾಕಿಕೊಡುವ ಅನಿವಾರ್ಯತೆ ಇದೆ ಎಂದು ಅವರು ಪ್ರತಿಪಾದಿಸಿದರು.

ಕೊಡವರ ಹೆಸರಿನಲ್ಲಿ ನಡೆಯುವ ಹೋರಾಟಗಳು ಡಂಬಾಚಾರಿಕೆಯಿAದ ಕೂಡಿರಬಾರದು, ಕೊಡವ ಎಂಬ ತಲೆಬರಹವನ್ನು ಇಟ್ಟುಕೊಂಡು ಕೊಡವರನ್ನು ವಂಚಿಸುವ ಪ್ರಯತ್ನಗಳು ಇತಿಹಾಸದಿಂದಲೂ ನಿರಂತರ ನಡೆಯುತ್ತಾ ಬಂದಿದೆ, ಆದರೆ ಅಂತಹ ದುಷ್ಟ ಶಕ್ತಿಗಳು ಕಾಲಕಾಲಕ್ಕೆ ನಿರ್ನಾಮವಾಗುತ್ತಲೇ ಬಂದಿವೆ ಎಂಬುವುದನ್ನು ಮರೆಯುವಂತಿಲ್ಲ ಎಂದು ಅವರು ಮಾರ್ಮಿಕವಾಗಿ ನುಡಿದರು.

ಸಭೆಯ ಪ್ರಾರಂಭದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅಸೋಸಿಯೇಷನ್ ಅಧ್ಯಕ್ಷ ಕುಕ್ಕೇರ ಜಯ ಚಿಣ್ಣಪ್ಪ, ಕೊಡವ ಭವನ ಸ್ಥಾಪಿಸಿದರ ಹಿಂದೆ ಅರೆಕಾಡು ಹೊಸ್ಕೇರಿ ಗ್ರಾಮದ ಕೊಡವರು ಒಗ್ಗಟ್ಟಿನಿಂದ ಸೇರಿ ಕೊಡವ ಜನಾಂಗದ ಏಳಿಗೆಗೆ ಪೂರಕವಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಸ್ಪಷ್ಟ ಉದ್ದೇಶವಿದೆ. ಅದಕ್ಕೆ ಪೂರಕವಾಗಿ ಇಂದಿನ ಈ ಚಿಂತನಾ ಸಭೆಯನ್ನು ಏರ್ಪಡಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಚಿಂತನೆಯಿದೆ ಎಂದು ಹೇಳಿದರು.

ಕೊಕ್ಕಲೆಮಾಡ ಮಂಜು ಚಿಣ್ಣಪ್ಪನವರಿಗೆ ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ಬಲ್ಲಚಂಡ ವಿಠಲ ಕಾವೇರಪ್ಪ ಸ್ವಾಗತಿಸಿ, ಕಾರ್ಯದರ್ಶಿ ನೆಲ್ಲಮಕ್ಕಡ ಪವನ್ ವಂದಿಸಿದರು. ಸಭೆಯಲ್ಲಿ ಯುಕೊ ಸದಸ್ಯ ನೆಲ್ಲಮಕ್ಕಡ ಮಾದಯ್ಯ, ತೀತಿಮಾಡ ಬೋಸ್ ಅಯ್ಯಪ್ಪ, ಪುದಿಯೊಕ್ಕಡ ದಿನೇಶ್ ಮತ್ತು ಅಸೋಸಿಯೇಷನ್ ಸದಸ್ಯರು ಉಪಸ್ಥಿತರಿದ್ದರು.